ಆ್ಯಪ್ನಗರ

ಪಡಿತರ ಚೀಟಿಗಾಗಿ ಪಟ್ಟು

ರಾಮದುರ್ಗ :ಪಡಿತರ ಚೀಟಿ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಬೇಸತ್ತ ಸಾರ್ವಜನಿಕರು ಮಂಗಳವಾರ ಮಿನಿ ವಿಧಾನಸೌಧದಲ್ಲಿರುವ ಆಹಾರ ಇಲಾಖೆಯ ಕೊಠಡಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ವಿಕ ಸುದ್ದಿಲೋಕ 16 Mar 2016, 3:43 am
-ಆಹಾರ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರ ಮುತ್ತಿಗೆ
Vijaya Karnataka Web
ಪಡಿತರ ಚೀಟಿಗಾಗಿ ಪಟ್ಟು




ರಾಮದುರ್ಗ :ಪಡಿತರ ಚೀಟಿ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಬೇಸತ್ತ ಸಾರ್ವಜನಿಕರು ಮಂಗಳವಾರ ಮಿನಿ ವಿಧಾನಸೌಧದಲ್ಲಿರುವ ಆಹಾರ ಇಲಾಖೆಯ ಕೊಠಡಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಒಂದು ವರ್ಷವಾಗಿದೆ. ಚುನಾವಣೆ ಇರುವುದರಿಂದ ಹೊಸ ಚೀಟಿ ಕೊಡಲು ಬರುವುದಿಲ್ಲ ಎಂದು ಹೇಳಿದ್ದೀರಿ. ಈಗ ಚುನಾವಣೆ ಮುಗಿದಿದೆ. ರೇಶನ್ ಕಾರ್ಡ್ ಕೇಳಲು ಬಂದರೆ ನಿಮ್ಮ ಗ್ರಾಮ ಪಂಚಾಯಿತಿಗೆ ಹೋಗಿ ಎನ್ನುತ್ತೀರಿ. ಅಲ್ಲಿಗೆ ಹೋದರೆ ತಹಸೀಲ್ದಾರ ಕಚೇರಿಯಲ್ಲಿ ಕೊಡುತ್ತಾರೆ ಎನ್ನುತ್ತಾರೆ. ಅಲ್ಲಿಂದಿಲ್ಲಿಗೆ ಇಲ್ಲಿಂದಲ್ಲಿಗೆ ತಿರುಗಾಡಿ ಸಾಕಾಗಿದೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಡಿತರ ಚೀಟಿ ಕೊಡುವವರೆಗೂ ಇಂದಿಲ್ಲ ಕದಲುವುದಿಲ್ಲ. ಇಂದು ಕೊಡದಿದ್ದರೆ ಅಧಿಕಾರಿಗಳನ್ನು ಕಚೇರಿ ಒಳಗಿಟ್ಟು ಬೀಗ ಹಾಕುತ್ತೇವೆ ಎಂದು ಎಚ್ಚರಿಸಿದರು. ನಂತರ ಅಲ್ಲಿನ ಸಿಬ್ಬಂದಿ ಮೇಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ನಂತರ ಅರ್ಜಿ ಸಲ್ಲಿಸಿದ ಎಲ್ಲರಿಗೂ ಪಡಿತರ ಚೀಟಿ ವಿತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ