Please enable javascript.ಉಪಚುನಾವಣೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸೂಚನೆ - ಉಪಚುನಾವಣೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸೂಚನೆ - Vijay Karnataka

ಉಪಚುನಾವಣೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸೂಚನೆ

Vijaya Karnataka Web 13 Aug 2014, 4:27 am
Subscribe

ಬೆಳಗಾವಿ :ಚಿಕ್ಕೋಡಿ-ಞ;ಸದಲಗಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಈ ಕ್ಷೇತ್ರದಲ್ಲಿ ಬರುವ ಸಹಕಾರಿ ಸಕ್ಕರೆ ಕಾರಖಾನೆ ಆಡಳಿತ ಮಂಡಳಿ ತನ್ನ ಷೇರುದಾರರ ಮೇಲೆ ರಾಜಕೀಯ ಪಕ್ಷವೊಂದರ ಪರವಾಗಿ ಪ್ರಭಾವ ಬೀರುತ್ತಿದೆ ಎಂಬ ದೂರುಗಳು ಬಂದಿವೆ. ಇಂಥ ಪ್ರಕರಣಗಳು ನಡೆದಲ್ಲಿ ಅದನ್ನು ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಎನ್. ಜಯರಾಮ್ ತಿಳಿಸಿದ್ದಾರೆ.

ಉಪಚುನಾವಣೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸೂಚನೆ
ಬೆಳಗಾವಿ :ಚಿಕ್ಕೋಡಿ-ಞ;ಸದಲಗಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಈ ಕ್ಷೇತ್ರದಲ್ಲಿ ಬರುವ ಸಹಕಾರಿ ಸಕ್ಕರೆ ಕಾರಖಾನೆ ಆಡಳಿತ ಮಂಡಳಿ ತನ್ನ ಷೇರುದಾರರ ಮೇಲೆ ರಾಜಕೀಯ ಪಕ್ಷವೊಂದರ ಪರವಾಗಿ ಪ್ರಭಾವ ಬೀರುತ್ತಿದೆ ಎಂಬ ದೂರುಗಳು ಬಂದಿವೆ. ಇಂಥ ಪ್ರಕರಣಗಳು ನಡೆದಲ್ಲಿ ಅದನ್ನು ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಎನ್. ಜಯರಾಮ್ ತಿಳಿಸಿದ್ದಾರೆ.

ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯು ಷೇರುದಾರರಿಗೆ ತಮ್ಮ ಪಕ್ಷದ ಪರವಾಗಿ ಮತ ಚಲಾಯಿಸುವಂತೆ ಪ್ರಭಾವ ಬೀರುತ್ತಿದೆ. ಇಲ್ಲದಿದ್ದರೆ ಷೇರುಗಳನ್ನು ರದ್ದುಪಡಿಸಲಾಗುವುದೆಂದು ಭಯಪಡಿಸುತ್ತಿದ್ದಾರೆಂದು ದೂರುಗಳು ಬಂದಿವೆ.

ಈ ಚುನಾವಣೆಗೆ ಸಂಬಂಧಿಸಿದಂತೆ ಷೇರುದಾರರ ಸದಸ್ಯತ್ವವನ್ನು ರದ್ದುಗೊಳಿಸಲು ಸಾಧ್ಯವಿರುವುದಿಲ್ಲ ಎಂದು ತಿಳಿಸಿರುವ ಜಿಲ್ಲಾ ಚುನಾವಣಾಧಿಕಾರಿಗಳು ಸಾರ್ವಜನಿಕರು ಮುಕ್ತ ಹಾಗೂ ನಿರ್ಭಿತಿಯಿಂದ ಮತ ಚಲಾಯಿಸಬೇಕೆಂದು ತಿಳಿಸಿದ್ದಾರೆ.

ಸಕ್ಕರೆ ಕಾರ್ಖಾನೆಯ ನೌಕರರು ಸಹ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆಂದು ಈ ನೌಕರರನ್ನು ಚುನಾವಣೆಗಾಗಿ ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರುಗಳು ಸಹ ಬಂದಿದ್ದು, ಸಕ್ಕರೆ ಕಾರ್ಖಾನೆಯ ನೌಕರರು ಒಂದು ವೇಳೆ ಯಾವುದೇ ಅಭ್ಯರ್ಥಿ ಅಥವಾ ಪಕ್ಷದ ಪರವಾಗಿ ಕೆಲಸ ಮಾಡಿರುವುದು ಕಂಡು ಬಂದಲ್ಲಿ ಅಂತಹ ನೌಕರರ ವಿರುದ್ಧ ಪ್ರಜಾಪ್ರತಿನಿಧಿ ಕಾಯಿದೆ ಅನ್ವಯ ಕ್ರಮಕೈಗೊಳ್ಳಲಾಗುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

ಈ ಎರಡು ವಿಷಯಗಳ ಕುರಿತಂತೆ ಯಾವುದಾದರೂ ದೂರು ಹಾಗೂ ಸಮಸ್ಯೆಗಳಿದ್ದಲ್ಲಿ ಈ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಚಿಕ್ಕೋಡಿ ಉಪವಿಭಾಗಾಧಿಕಾರಿಗಳಿಗೆ ಲಿಖಿತವಾಗಿ ಅಥವಾ ದೂರವಾಣಿ ಮೂಲಕ 08338-ಞ;272132, ಜಿಲ್ಲಾ ಚುನಾವಣಾಧಿಕಾರಿಗಳ ದೂರವಾಣಿ ಸಂಖ್ಯೆ: 0831-ಞ;2407276 ಗೆ ಅಥವಾ ಸಾಮಾನ್ಯ ವೀಕ್ಷಕರಾದ ಗೋಪಾಲ ಚಂದ್ರ ದಾಸ್ ಅವರನ್ನು ಮೊ: 09483880727 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ