ಆ್ಯಪ್ನಗರ

ಚಿಕ್ಕೋಡಿ: 1.51 ಲಕ್ಷ ಕ್ಯೂಸೆಕ್‌ ನೀರಿನ ಹರಿವು ಕೃಷ್ಣಾ ಅಬ್ಬರ ಮತ್ತಷ್ಟು ಹೆಚ್ಚಳ

ಚಿಕ್ಕೋಡಿ: ತಾಲೂಕಿನಲ್ಲಿ ಗುರುವಾರ ರಾತ್ರಿಯಿಂದ ...

Vijaya Karnataka 8 Aug 2020, 5:00 am
ಚಿಕ್ಕೋಡಿ: ತಾಲೂಕಿನಲ್ಲಿ ಗುರುವಾರ ರಾತ್ರಿಯಿಂದ ಮಳೆ ಅರ್ಭಟ ತಗ್ಗಿದೆ. ಆದರೆ, ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿಮಳೆ ಮುಂದುವರಿದಿದ್ದು, ನದಿ ನೀರಿನ ಮಟ್ಟ ಸತತವಾಗಿ ಏರುತ್ತಿದೆ. ಶುಕ್ರವಾರ ಕೃಷ್ಣಾ ನದಿಗೆ 1,51,800 ಕ್ಯೂಸೆಕ್‌ ನೀರಿನ ಹರಿವು ಇದೆ.
Vijaya Karnataka Web 7CKD1_53
ಚಿಕ್ಕೋಡಿ ತಾಲೂಕಿನ ಯಡೂರ ಬಳಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವ ದೃಶ್ಯ.


ಗುರುವಾರ ಕೃಷ್ಣಾ ನದಿಗೆ 1.31 ಲಕ್ಷ ಕ್ಯೂಸೆಕ್‌ ನೀರಿನ ಹರಿವು ಇತ್ತು. ಹಿಪ್ಪರಗಿ ಬ್ಯಾರೇಜ್‌ನಿಂದ 1.47ಲಕ್ಷ ಕ್ಯೂಸೆಕ್‌ ನೀರನ್ನು ಹಾಗೂ ಆಲಮಟ್ಟಿ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್‌ ನೀರನ್ನು ಹೊರಗೆ ಹರಿಬಿಡಲಾಗುತ್ತಿದೆ. ಆದರೂ ಕೃಷ್ಣಾ ನದಿ ನೀರಿನ ಮಟ್ಟದಲ್ಲಿಇಳಿಮುಖವಾಗಿಲ್ಲ. ಈ ಮಧ್ಯೆ ದೂಧಗಂಗಾ, ವೇದಗಂಗಾ ಮತ್ತು ಕೃಷ್ಣಾ ನದಿಗೆ ನಿರ್ಮಿಸಿರುವ ಕೆಳ ಹಂತದ 7 ಸೇತುವೆಗಳು ಇನ್ನೂ ಮುಳುಗಡೆಯಾಗೇ ಉಳಿದಿವೆ.

ಕೃಷ್ಣಾ ನದಿಗೆ ಯಡೂರ ಬಳಿ ನಿರ್ಮಿಸಲಾಗಿರುವ ಯಡೂರ-ಕಲ್ಲೋಳ, ದೂಧಗಂಗಾ ನದಿಗೆ ಮಲಿಕವಾಡ ಗ್ರಾಮದ ಬಳಿ ನಿರ್ಮಿಸಲಾಗಿರುವ ಮಲಿಕವಾಡ-ದತ್ತವಾಡ ಸೇತುವೆ ಮತ್ತು ವೇದಗಂಗಾ ನದಿಗೆ ಅಡ್ಡಲಾಗಿರುವ ಸಿದ್ನಾಳ-ಹುನ್ನರಗಿ, ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಜತ್ರಾಟ-ಭಿವಶಿ, ಸಿದ್ನಾಳ-ಅಕ್ಕೋಳ ಸೇರಿದಂತೆ ಕೆಳಹಂತದ 7 ಸೇತುವೆಗಳು ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ನದಿ ತೀರದ ಜನರಲ್ಲಿಪ್ರವಾಹದ ಭೀತಿ ಮತ್ತಷ್ಟು ಹೆಚ್ಚಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ