ಆ್ಯಪ್ನಗರ

ಬೆಳಗಾವಿ ಲೋಕಸಭಾ ಉಪಚುನಾವಣೆ ಜೆಡಿಎಸ್‌ ಅಭ್ಯರ್ಥಿ ಆಯ್ಕೆಗೆ 28ರಂದು ಎಚ್‌ಡಿಡಿ ನೇತೃತ್ವದಲ್ಲಿ ಸಭೆ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನ.28 ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಬೆಳಗಾವಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ತಿಳಿಸಿದರು.

Vijaya Karnataka Web 26 Nov 2020, 7:24 am
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಚರ್ಚಿಸಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಬೆಂಗಳೂರಿನಲ್ಲಿ ನ.28 ರಂದು ಸಭೆ ಕರೆದಿದ್ದಾರೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ತಿಳಿಸಿದರು.
Vijaya Karnataka Web HDD


ಬೆಳಗಾವಿ: ಜಿಲೆಟಿನ್ ಬಾಂಬ್ ಸ್ಫೋಟಗೊಂಡು ವ್ಯಕ್ತಿ ದುರ್ಮರಣ, ಚೆಲ್ಲಾಪಿಲ್ಲಿಯಾದ ಮೃತದೇಹ!

ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಜೆಡಿಎಸ್‌ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಉಪಚುನಾವಣೆ, ಗ್ರಾಪಂ, ತಾಪಂ, ಜಿಪಂ ಸಾರ್ವತ್ರಿಕ ಚುನಾವಣೆಗಳಿಗೆ ಸಜ್ಜಾಗಬೇಕಿದೆ. ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದರು.

ದುಬಾರಿಯಾದ ಕರಿಬೇವು..! ಐದು ರೂಪಾಯಿಗೆ ಸಿಗ್ತಿದ್ದ ಒಗ್ಗರಣೆ ಸೊಪ್ಪಿನ ಈಗಿನ ಬೆಲೆ ಎಷ್ಟು ಗೊತ್ತಾ?

ಅಲ್ಲದೇ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ನಾಸೀರ್‌ ಬಾಗವಾನ್‌ ಆಯ್ಕೆ ಆಗಿರುವುದರಿಂದ ಕಿತ್ತೂರು, ಬೈಲಹೊಂಗಲ, ಖಾನಾಪುರ ಭಾಗದಲ್ಲಿಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದರು. ಇದೇ ವೇಳೆ ನಾಸೀರ್‌ ಬಾಗವಾನ್‌ ಅವರನ್ನು ಸನ್ಮಾನಿಸಲಾಯಿತು. ಮುಖಂಡರಾದ ಅಶೋಕ ಪೂಜಾರಿ, ಫೈಜುಲ್ಲಾ ಮಾಡಿವಾಲೆ, ಬಸವರಾಜ ರುದ್ರಗೌಡ, ಮೇಘಾ ಕುಂದರಗಿ, ಪ್ರಕಾಶ ಸೊನವಾಲ್ಕರ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ