ಆ್ಯಪ್ನಗರ

ಅಪ್ರಾಪ್ತೆಯ ಅಪಹರಣ: ಅಪರಾಧ ಸಾಬೀತು

ಬೆಳಗಾವಿ: ಅಪ್ರಾಪ್ತೆಯನ್ನು ಕಾಡುತ್ತಿದ್ದ ಯುವಕನ ವಿರುದ್ಧ ದಾಖಲಾಗಿದ್ದ ಪ್ರಕರಣದ ...

Vijaya Karnataka 1 Sep 2019, 5:00 am
ಬೆಳಗಾವಿ: ಅಪ್ರಾಪ್ತೆಯನ್ನು ಕಾಡುತ್ತಿದ್ದ ಯುವಕನ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಯುವಕನನ್ನು ಅಪರಾಧಿ ಎಂದು ಪರಿಗಣಿಸಿ ಶನಿವಾರ ತೀರ್ಪು ಪ್ರಕಟಿಸಿದೆ.
Vijaya Karnataka Web abduction of minor guilt proved
ಅಪ್ರಾಪ್ತೆಯ ಅಪಹರಣ: ಅಪರಾಧ ಸಾಬೀತು


ಚಿಕ್ಕೋಡಿಯ ರಿತೇಶ ಮಾರುತಿ ದೊಡಮನಿ ಶಿಕ್ಷೆಗೆ ಗುರಿಯಾದ ಅಪರಾಧಿ. ಕಾಲೇಜಿಗೆ ಹೋಗಿ ಬರುತ್ತಿದ್ದ ಬಾಲಕಿಯನ್ನು ಭೇಟಿ ಮಾಡುತ್ತಿದ್ದ ರಿತೇಶ, ಆಕೆಯನ್ನು ಮದುವೆಯಾಗುವುದಾಗಿ ಕಾಡುತ್ತಿದ್ದ. ವಿರೋಧ ವ್ಯಕ್ತಪಡಿಸಿದರೂ ಆಕೆಯನ್ನು ಅಪಹರಿಸಿ ಪುಣೆ-ಮುಂಬೈಗೆ ಕರೆದೊಯ್ದು ಜೀವ ಬೆದರಿಕೆ ಹಾಕಿದ್ದ. ಬಾಲಕಿಯ ಪಾಲಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಚಿಕ್ಕೋಡಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಕೈಗೊಂಡ 3ನೇ ಅಧಿಕ ಜಿಲ್ಲಾಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಜಿ.ನಂಜುಂಡಯ್ಯ ಶಿಕ್ಷೆ ಪ್ರಮಾಣವನ್ನು ಸೆ.3ಕ್ಕೆ ಕಾಯ್ದಿರಿಸಿ ತೀರ್ಪು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಎಲ್‌.ವಿ.ಪಾಟೀಲ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ