ಆ್ಯಪ್ನಗರ

ಗ್ರಾಮ ಸಹಾಯಕರ ಬೇಡಿಕೆ ಈಡೇರಿಸಲು ಕ್ರಮ

ಬೆಳಗಾವಿ : ಗ್ರಾಮ ಸಹಾಯಕರ ಬೇಡಿಕೆ ಈಡೇರಿಸಲು ಇನ್ನೊಂದು ವಾರದಲ್ಲಿ...

Vijaya Karnataka 19 Dec 2018, 5:00 am
ಬೆಳಗಾವಿ : ಗ್ರಾಮ ಸಹಾಯಕರ ಬೇಡಿಕೆ ಈಡೇರಿಸಲು ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿ ಹಾಗೂ ಕಂದಾಯ ಅಧಿಧೀಕ್ಷ ಕರ ಜತೆ ಚರ್ಚೆ ಮಾಡಿ ಸರಕಾರದ ತೀರ್ಮಾನ ತಿಳಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.
Vijaya Karnataka Web BEL-18 LBS 1


ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಮಂಗಳವಾರ ಸುವರ್ಣ ವಿಧಾನಸೌಧದ ಸಮೀಪ ಕೊಂಡಸಕೊಪ್ಪದಲ್ಲಿ ಗ್ರಾಮ ಸಹಾಯಕರ ಸಂಘದ ಸದಸ್ಯರು ನಡೆಸಿದ ಪ್ರತಿಭಟನೆ ಸ್ಥಳಕ್ಕೆ ತೆರಳಿ ಮನವಿ ಸ್ವೀಕರಿಸಿದ ಸಚಿವರು ಈ ಭರವಸೆ ನೀಡಿದರು.

40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಆದರೆ, ಸರಕಾರ ಗ್ರಾಮ ಸಹಾಯಕರ ಬೇಡಿಕೆ ಈಡೇರಿಸುವತ್ತ ಗಮನ ಹರಿಸಿಲ್ಲ. ಸಮಾನ ವೇತನ ನಿಗದಿಪಡಿಸಿಲ್ಲ. ದಿನದ 24 ಗಂಟೆ ಸರಕಾರದ ಹಾಗೂ ಸಾರ್ವಜನಿಕರ ಕೆಲಸ ಕಾರ್ಯ ಮಾಡುತ್ತಿದ್ದೇವೆ. ಗ್ರಾಮ ಸಹಾಯಕರನ್ನು ಡಿ ಗ್ರೂಪ್‌ ನೌಕರರೆಂದು ಪರಿಗಣಿಸಬೇಕು. ಸರಕಾರದ ಇತರ ನೌಕರರಿಗೆ ಸಿಗುವಂತಹ ಪಿಂಚಣಿ, ರಜೆ, ಇನ್ನಿತರ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

ಸಂಘದ ಮುಖಂಡರಾದ ಎಂ.ವಿಜಯಕುಮಾರ, ಮುದ್ದುಕೃಷ್ಣ, ಎಚ್‌.ಎನ್‌. ದೇವರಾಜ್‌, ವೆಂಕಟಾಚಲಪ್ಪ, ಬಿ.ಶಿವರುದ್ರಪ್ಪ, ಪ್ರತಾಪ್‌, ಶಿವರುದ್ರಪ್ಪ, ಪ್ರಕಾಶ ಅಂತಣ್ಣನವರ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ