ಆ್ಯಪ್ನಗರ

ಬೆಳಗಾವಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಹೆಚ್ಚುವರಿ ಯೂರಿಯಾ ಗೊಬ್ಬರ ನೀಡಿಕೆ

ಬೆಳಗಾವಿ: ಬೆಳಗಾವಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಿಗೆ ...

Vijaya Karnataka 21 Jul 2020, 5:00 am
ಬೆಳಗಾವಿ: ಬೆಳಗಾವಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಯೂರಿಯಾ ಗೊಬ್ಬರವನ್ನು ಹೆಚ್ಚುವರಿಯಾಗಿ ನೀಡುವ ಬಗ್ಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
Vijaya Karnataka Web ERANNA KADADI081122
ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ದೆಹಲಿಯಲ್ಲಿ ಭೇಟಿಯಾದರು.


ಸೋಮವಾರ ದೆಹಲಿಯಲ್ಲಿಸಚಿವರನ್ನು ಭೇಟಿ ಮಾಡಿದ ಈರಣ್ಣ ಕಡಾಡಿ ಅವರು, ಬೆಳಗಾವಿ ಜಿಲ್ಲೆಯ ಯೂರಿಯಾ ಗೊಬ್ಬರದ ಬೇಡಿಕೆ ಕುರಿತು ಮನವಿ ಸಲ್ಲಿಸಿದರು. ಬಳಿಕ ಸಚಿವರೊಂದಿಗೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ಸದ್ಯದಲ್ಲಿಯೇ ಬೆಳಗಾವಿ ಮತ್ತು ದಾವಣಗೆರೆಗೆ ರೈಲಿನ ಮೂಲಕ ರಸಗೊಬ್ಬರ ಪೂರೈಕೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಈರಣ್ಣ ಕಡಾಡಿ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ