ಆ್ಯಪ್ನಗರ

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಶಾಸಕರ ಸೂಚನೆ

ಯಮಕನಮರಡಿ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಹತ್ತರಗಿ ಬಸ್‌ ನಿಲ್ದಾಣ ಹೀಗೆ ಅನೇಕ ಸ್ಥಳಗಳಲ್ಲಿ ...

Vijaya Karnataka 27 Jul 2019, 5:00 am
ಯಮಕನಮರಡಿ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಹತ್ತರಗಿ ಬಸ್‌ ನಿಲ್ದಾಣ ಹೀಗೆ ಅನೇಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಸೇವನೆ ಮತ್ತಿತರ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಶಾಸಕ ಸತೀಶ್‌ ಜಾರಕಿಹೊಳಿ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web BEL-26YMD1


ಇಲ್ಲಿನ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಶುಕ್ರವಾರ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ, ಅಂಗನವಾಡಿ ಕಟ್ಟಡ, ರುದ್ರಭೂಮಿ ಆವರಣ ಗೋಡೆಗಳನ್ನು ನಿರ್ಮಿಸಬೇಕು. ಗ್ರಾಮದಲ್ಲಿನ ಓವರ್‌ ಹೆಡ್‌ ಟ್ಯಾಂಕ್‌ನ ಆವರಣದಲ್ಲಿ ಸಸಿಗಳನ್ನು ನೆಡಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯಮಕನಮರಡಿ ವಿದ್ಯಾವರ್ಧಕ ಸಂಘ ಕುಡಿಯುವ ನೀರಿನ ನಳ ಜೋಡಣೆಯ ವಿಷಯ ಕೋರ್ಟ್‌ನಲ್ಲಿದ್ದು ಅಲ್ಲಿಯವರೆಗೆ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ. ನೀರು ಬಿಡುವ ಸಿಬ್ಬಂದಿ ವೇತನ ನೀಡಲು ತೊಂದರೆಯಾದರೆ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯನ್ನು ರದ್ದು ಪಡಿಸಿ ಹೊಸ ಸಮಿತಿ ರಚನೆ ಮಾಡಿ ಎಂದರು.

ಶೌಕತ್‌ ಖಾಜಿ ಮಾತನಾಡಿ, ಯಮಕನಮರಡಿ ಕಂದಾಯ ಇಲಾಖೆಯಲ್ಲಿ ಅಟಲ್‌ ಸ್ನೇಹಿ ಕೇಂದ್ರದಲ್ಲಿ ಕಂಪ್ಯೂಟರ್‌ ಉತಾರ ಲಭಿಸುತ್ತಿಲ್ಲ. ಆಧಾರ ಕಾರ್ಡ್‌ ಸಮಸ್ಯೆ ಇದೆ, ಸಾರ್ವಜನಿಕ ಮೂತ್ರಾಲಯ, ಶೌಚಾಲಯಗಳಿಲ್ಲಎಂದು ಸಚಿವರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಅನೇಕ ಜನರು ತಮ್ಮ ಸಮಸ್ಯೆಗಳನ್ನು ಸಚಿವರೆದುರು ಹೇಳಿಕೊಂಡರು. ಗ್ರಾಪಂ ಅಧ್ಯಕ್ಷೆ ಅವ್ವಕ್ಕಾ ಮಾದರ ಹಾಗೂ ಕಾಂಗ್ರೆಸ್‌ ಯುವ ಮುಖಂಡರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ