ಆ್ಯಪ್ನಗರ

ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುವ ಕಚೇರಿಗಳಿಗೆ ಸೌಕರ್ಯ; ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭರವಸೆ

ಬೆಳಗಾವಿ: ಸರಕಾರದ ಆದೇಶದಂತೆ ವಿವಿಧ ಇಲಾಖೆ ...

Vijaya Karnataka 3 Jul 2020, 5:00 am
ಬೆಳಗಾವಿ: ಸರಕಾರದ ಆದೇಶದಂತೆ ವಿವಿಧ ಇಲಾಖೆ ಹಾಗೂ ನಿಗಮಗಳ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ. ಸ್ಥಳಾಂತರಗೊಂಡ ಕಚೇರಿಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದರು.
Vijaya Karnataka Web suvarna vidhana soudha
ಸುವರ್ಣ ವಿಧಾನಸೌಧ


ಬಾಡಿಗೆ ಕಟ್ಟಡಗಳಲ್ಲಿಕಾರ‍್ಯ ನಿರ್ವಹಿಸುತ್ತಿರುವ ಸರಕಾರದ ವಿವಿಧ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸುವ ಕುರಿತು ಸರಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿಗುರುವಾರ ಸಂಬಂಧಿಸಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸುವರ್ಣ ವಿಧಾನಸೌಧ ಉತ್ತರ ಕರ್ನಾಟಕದ ಹೆಮ್ಮೆಯ ಪ್ರತೀಕ. ಬಾಡಿಗೆ ಕಟ್ಟಡದಲ್ಲಿಇರುವ 24 ಕಚೇರಿಗಳನ್ನು ಸ್ಥಳಾಂತರ ಮಾಡಲು ಸರಕಾರ ನಿರ್ಧರಿಸಿದ್ದು, ಕಚೇರಿಗಳಿಗೆ ಬೇಕಾಗುವ ಎಲ್ಲಾವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಿ ಕೊಡಲಾಗುವುದು. ಸಾರಿಗೆ ಸಂಸ್ಥೆ ಕಚೇರಿಗಳ ಸಮಯಕ್ಕೆ ಅನುಗುಣವಾಗಿ ಬಸ್‌ಗಳ ವ್ಯವಸ್ಥೆ ಮಾಡಬೇಕು. ಕಚೇರಿಗಳ ಸ್ಥಳಾಂತರದ ಬಳಿಕ ಎಲ್ಲರೂ ವಾತಾವರಣಕ್ಕೆ ಹೊಂದಿಕೊಂಡು ಕೆಲಸ ನಿರ್ವಹಿಸಬೇಕು. ಪ್ರಾರಂಭದಲ್ಲಿಕಚೇರಿಗಳಿಗೆ ಬೇಕಾಗುವ ಕುರ್ಚಿ, ಟೇಬಲ್‌ಗಳ ಖರೀದಿಗೆ ಅವಕಾಶ ಇಲ್ಲ. ಹೀಗಾಗಿ ಕಚೇರಿಗಳಲ್ಲಿಈಗಾಗಲೇ ಇರುವ ವಸ್ತುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಲೋಕೋಪಯೋಗಿ ಇಲಾಖೆಯವರು ಕ್ಯಾಂಟೀನ್‌ ವ್ಯವಸ್ಥೆ ಮಾಡಿಕೊಡಬೇಕು. ಸಿಬ್ಬಂದಿಯ ಆರೋಗ್ಯದ ದೃಷ್ಟಿಯಿಂದ ಹೆಲ್ತ್‌ ಕೇರ್‌ ಸೆಂಟರ್‌ ಸ್ಥಾಪನೆ ಮಾಡಲಾಗುವುದು. ಅಂಚೆ ಕಚೇರಿ ಸುವರ್ಣ ವಿಧಾನಸೌಧದಲ್ಲಿಈಗಾಗಲೇ ಕಾರ‍್ಯ ನಿರ್ವಹಿಸುತ್ತಿದೆ. ಬ್ಯಾಂಕ್‌ ಶಾಖೆ ಹಾಗೂ ಎಟಿಎಂ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಪ್ರಾಸ್ತಾವಿಕ ಮಾತನಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ