ಆ್ಯಪ್ನಗರ

ಜನಸೇವಕ ಸಮಾವೇಶ ಸಮಾರೋಪ: ಬೆಳಗಾವಿಗೆ ಅಮಿತ್ ಶಾ ಆಗಮನ, ಗಣ್ಯರಿಂದ ಸ್ವಾಗತ

ಬಿಜೆಪಿಯಿಂದ ಆಯೋಜಿಸಿರುವ ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಗಣ್ಯರು ಸ್ವಾಗತಿಸಿದರು.

Vijaya Karnataka Web 17 Jan 2021, 12:47 pm
ಬೆಳಗಾವಿ: ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಜ.17ರಂದು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
Vijaya Karnataka Web ಬೆಳಗಾವಿಗೆ ಅಮಿತ್ ಶಾ ಭೇಟಿ


ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಬರಮಾಡಿಕೊಳ್ಳಲಾಯಿತು.
ಕೃಷಿ ಮಸೂದೆ ಜಾರಿ ವಿರೋಧ, ಬೆಳಗಾವಿಯಲ್ಲಿ ರೈತರಿಂದ ಅರೆಬೆತ್ತಲೆ ಮೆರವಣಿಗೆ; ಅಮಿತ್ ಶಾ ಗೆ ಗೋ ಬ್ಯಾಕ್!

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಹೇಶ್ ಕುಮಠಳ್ಳಿ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಶೇಷ ವಿಮಾನದಲ್ಲಿ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರು ನಂತರ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಿದರು.
ಬೆಳಗಾವಿಯಲ್ಲಿ ಜ.17 ರಂದು ಜನ ಸೇವಕ ಸಮಾವೇಶ ಸಮಾರೋಪ; ಸಚಿವ ರಮೇಶ್ ಜಾರಕಿಹೊಳಿ ಪರಿಶೀಲನೆ
ಜನಸೇವಕ ಸಮಾವೇಶಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎರಡೂವರೆ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಅಮಿತ್‌ ಶಾ ಅವರಿಗೆ ಸ್ವಾಗತ ಕೋರುವ ದೊಡ್ಡ ದೊಡ್ಡ ಬ್ಯಾನರ್ ಹಾಗೂ ಕಟೌಟ್ ಗಳು ರಾರಾಜಿಸುತ್ತಿವೆ. ಪ್ರಮುಖ ವೃತ್ತಗಳಲ್ಲಿ ಬಿಜೆಪಿ ಧ್ವಜಗಳನ್ನು ಕಟ್ಟಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ