ಆ್ಯಪ್ನಗರ

ಅಕ್ರಮ ಮದ್ಯ ಸಾಗಿಸುತ್ತಿದ್ದವನ ಬಂಧನ

ಖಾನಾಪುರ: ತಾಲೂಕಿನ ಕಣಕುಂಬಿ ಬಳಿ ಶನಿವಾರ ...

Vijaya Karnataka 2 Feb 2020, 5:00 am
ಖಾನಾಪುರ: ತಾಲೂಕಿನ ಕಣಕುಂಬಿ ಬಳಿ ಶನಿವಾರ ಗೋವಾದಿಂದ ಗದಗ ನಗರಕ್ಕೆ ಅನಧಿಕೃತವಾಗಿ ಮದ್ಯ ಸಾಗಿಸುತ್ತಿದ್ದ ಆರೋಪಿಯನ್ನು ಕರ್ನಾಟಕ-ಗೋವಾ ಗಡಿಯ ಅಬಕಾರಿ ತನಿಖಾ ಠಾಣೆ ಸಿಬ್ಬಂದಿ ಬಂಧಿಸಿ, ಅಪಾರ ಪ್ರಮಾಣದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
Vijaya Karnataka Web 1KHANAPUR2_53
ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಅಬಕಾರಿ ಪೊಲೀಸರು.


ಗೋವಾ ರಾಜ್ಯದ ನೋಂದಣಿ ಹೊಂದಿದ ಸ್ಕಾರ್ಪಿಯೋ ವಾಹನದಲ್ಲಿಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪದಡಿ ಗದಗ ನಿವಾಸಿ ಮಾರುತಿ ಲಮಾಣಿ ಎಂಬ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಆರೋಪಿಯಿಂದ 1 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಮತ್ತು ಅಂದಾಜು 5 ಲಕ್ಷ ರೂ. ಮೌಲ್ಯದ ವಾಹನವನ್ನು ಅಬಕಾರಿ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಖಾನಾಪುರ ಅಬಕಾರಿ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ