ಆ್ಯಪ್ನಗರ

ಹಣ ನೀಡಿದವರಿಗೆ ಆಶ್ರಯ ಮನೆ ವಿತರಣೆ

ಸರಕಾರದ ಆಶ್ರಯ ಮನೆ ನೀಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಬುಧವಾರ ಮಣ್ಣೂರು ಗ್ರಾಮಸ್ಥರು

Vijaya Karnataka 16 May 2019, 5:00 am
ಬೆಳಗಾವಿ: ಸರಕಾರದ ಆಶ್ರಯ ಮನೆ ನೀಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಬುಧವಾರ ಮಣ್ಣೂರು ಗ್ರಾಮಸ್ಥರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
Vijaya Karnataka Web BEL-15 LBS 5


ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಪಂ ವ್ಯಾಪ್ತಿಯ ಮಣ್ಣೂರ ಗ್ರಾಮದ ಸರಕಾರಿ ಭೂಮಿಯಲ್ಲಿ ನಿರ್ಮಿಸಿದ ಆಶ್ರಮ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುತ್ತಿಲ್ಲ. ಹಣ ನೀಡುವವರಿಗೆ ಮಾತ್ರ ಆಶ್ರಯ ಮನೆಗಳನ್ನು ವಿತರಿಸುತ್ತಿದ್ದಾರೆ. ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಲವು ಅರ್ಹರಿಗೆ ಮನೆಗಳನ್ನು ನೀಡುತ್ತಿಲ್ಲ ಎಂದು ದೂರಿದರು.

ಬೇವಾಡಿ ಗ್ರಾಪಂ ವ್ಯಾಪ್ತಿಯಲ್ಲಿನ ಅನೇಕ ಮನೆ, ಜಾಗದ ದಾಖಲಾತಿಗಳನ್ನು ಕಾನೂನು ಬಾಹಿರವಾಗಿ ಬದಲಾವಣೆ ಮಾಡುತ್ತಿದ್ದಾರೆ. ಗ್ರಾಪಂ ಅಧ್ಯಕ್ಷ, ಸದಸ್ಯರು, ಪಿಡಿಒ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಅರ್ಹರಿಗೆ ಆಶ್ರಯ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಗ್ರಾಮಸ್ಥರಾದ ಕೃಷ್ಣಾ ದೇವರಮನಿ, ಶಿವಾಜಿ ಕದಂ, ಪರಶುರಾಮ ನಾಯಿಕ, ಎನ್‌.ಎಸ್‌. ಪಾಟೀಲ, ನಾಗವ್ವ ಸೊಳಗೇಕರ, ಅನಿತಾ ನಾಯಿಕ, ಕಾಶವ್ವ ಮರಣ್ಣವರ, ವಿಮಲ ಪಾಟೀಲ, ಕಲ್ಪನಾ ನಾಯಿಕ, ಸೋಮನಾಥ ಚೌಗಲೆ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ