ಆ್ಯಪ್ನಗರ

ಕರಡಿಗಳ ದಾಳಿ: ರೈತನಿಗೆ ಗಾಯ

ಖಾನಾಪುರ: ತಾಲೂಕಿನ ಲೋಂಡಾ ಅರಣ್ಯ ವಲಯದ ಡೊಂಗರಗಾಂವ ಗ್ರಾಮದ ಬಳಿ ಕೃಷಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ರೈತರೊಬ್ಬರ ಮೇಲೆ ಮೂರು ಕರಡಿಗಳು ಮಂಗಳವಾರ ಸಂಜೆ ...

Vijaya Karnataka 26 Jun 2019, 5:00 am
ಖಾನಾಪುರ : ತಾಲೂಕಿನ ಲೋಂಡಾ ಅರಣ್ಯ ವಲಯದ ಡೊಂಗರಗಾಂವ ಗ್ರಾಮದ ಬಳಿ ಕೃಷಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ರೈತರೊಬ್ಬರ ಮೇಲೆ ಮೂರು ಕರಡಿಗಳು ಮಂಗಳವಾರ ಸಂಜೆ ದಾಳಿ ನಡೆಸಿವೆ. ಘಟನೆಯಲ್ಲಿ ಆ ಗ್ರಾಮದ ರೈತ ನಾಮದೇವ ಪಾಲಕರ (55) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Vijaya Karnataka Web BEL-25KHANAPUR2


ಕೃಷಿಕ ನಾಮದೇವ ತಮ್ಮೂರಿನಿಂದ ಮೂರು ಕಿಮೀ ದೂರದಲ್ಲಿರುವ ಕೃಷಿ ಜಮೀನಿನಲ್ಲಿ ಭತ್ತದ ಬಿತ್ತನೆಗಾಗಿ ಕುಟುಂಬದ ಸದಸ್ಯರೊಂದಿಗೆ ತೆರಳಿದ್ದರು. ಸಂಜೆ ದಿನದ ಕೆಲಸ ಮುಗಿಸಿ ಹೊಲದಿಂದ ಮನೆಗೆ ಕಾಲ್ನಡಿಗೆ ಮೂಲಕ ಮರಳುವಾಗ ಕರಡಿಗಳು ದಾಳಿ ನಡೆಸಿವೆ. ಅವರನ್ನು ಹಿಂಬಾಲಿಸಿ ಬರುತ್ತಿದ್ದ ಕುಟುಂಬದವರು ಕರಡಿಗಳನ್ನು ಓಡಿಸಿದ್ದಾರೆ. ಆಕಸ್ಮಿಕವಾಗಿ ನಡೆದ ಈ ಘಟನೆಯಲ್ಲಿ ನಾಮದೇವ ಅವರ ಕಾಲು ಮತ್ತು ಸೊಂಟದ ಭಾಗಕ್ಕೆ ಕರಡಿಗಳು ಪರಚಿ ಗಾಯಗೊಳಿಸಿವೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಾಮದೇವ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ, ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ವೈದ್ಯರ ಸೂಚನೆ ಮೇರೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಸಹಾಯಕ ಅರಣ್ಯ ಸಂರಕ್ಷ ಣಾಧಿಕಾರಿ ಎಸ್‌.ಎಂ. ಸಂಗೊಳ್ಳಿ, ವಲಯ ಅರಣ್ಯಾಧಿಕಾರಿ ಎಸ್‌.ಎಸ್‌. ನಿಂಗಾಣಿ ಮತ್ತು ಸಿಬ್ಬಂದಿ ಡೊಂಗರಗಾಂವ ಗ್ರಾಮಕ್ಕೆ ತೆರಳಿ ಕರಡಿ ದಾಳಿಯ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ, ನಾಮದೇವ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಘಟನೆ ಕುರಿತು ಖಾನಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ