ಆ್ಯಪ್ನಗರ

ಬೆಳಗಾವಿ ಉಪಚುನಾವಣೆ: ಹಸಿರು ಶಾಲು ಧರಿಸಿ ನಾಮಪತ್ರ ಸಲ್ಲಿಸಿದ ಸತೀಶ್‌ ಜಾರಕಿಹೊಳಿಗೆ ಸಿದ್ದರಾಮಯ್ಯ, ಡಿಕೆಶಿ ಸಾಥ್‌

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಿದರು. ನಗರದ ಆರ್.ಟಿ.ಒ ವೃತ್ತದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಹಸಿರು ಶಾಲು ಧರಿಸಿದ್ದರು.

Vijaya Karnataka Web 29 Mar 2021, 12:26 pm
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಿದರು. ನಗರದ ಆರ್.ಟಿ.ಒ ವೃತ್ತದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಹಸಿರು ಶಾಲು ಧರಿಸಿದ್ದರು.
Vijaya Karnataka Web Sathish Jarkiholi


ದ್ವೀ ಪ್ರತಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಕೆ.ಹರೀಶಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು. ಉಳಿದ ಮುಖಂಡರಾದ ಎಸ್.ಆರ್.ಪಾಟೀಲ, ಎಂ.ಬಿ.ಪಾಟೀಲ, ಆರ್.ವಿ. ದೇಶಪಾಂಡೆ, ಲಕ್ಷ್ಮಿ ಹೆಬ್ಬಾಳಕರ, ನಿಸಾರ್ ಅಹ್ಮದ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರುಗಳು, ಮಾಜಿ ಸಚಿವರು ಡಿಸಿ ಕಚೇರಿ ಆವರಣದ ಹೊರಗಡೆ ಇದ್ದರು.

ಸಣ್ಣ ಅಪಸ್ವರವೂ ಇಲ್ಲದ ಪ್ರಬಲ ನಾಯಕನಿಗೆ ಟಿಕೆಟ್ ನೀಡಿರುವುದು ಪಕ್ಷ ಶಿಸ್ತಿಗೆ ಸ್ಪಷ್ಟ ಸಾಕ್ಷಿ: ಡಿಕೆಶಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ