ಆ್ಯಪ್ನಗರ

ಕೆಜಿ ಹಳ್ಳಿ ಗಲಭೆಕೋರರು ದೇಶದ್ರೋಹಿಗಳು: ಬೆಳಗಾವಿ ಸಂಸದ ಸುರೇಶ್ ಅಂಗಡಿ ಕಿಡಿ!

ರಾಜ್ಯ ರಾಜಧಾನಿ ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ಗಲಭೆ ಸೃಷ್ಟಿಸುವುದರ ಹಿಂದೆ ವ್ಯವಸ್ಥಿತ ಪಿತೂರಿ ಅಡಗಿದೆ ಎಂದು ಅನುಮಾನ ವ್ಯಕ್ತಪಡಿಸಿರುವ ಬೆಳಗಾವಿ ಸಂಸದ ಸುರೇಶ್ ಅಂಗಡಿ, ಗಲಭೆಕೋರರನ್ನು ದೇಶದ್ರೋಹಿಗಳೆಂದು ಕರೆದಿದ್ದಾರೆ.

Vijaya Karnataka Web 12 Aug 2020, 2:33 pm
ಬೆಳಗಾವಿ: ರಾಜ್ಯ ರಾಜಧಾನಿ ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ಗಲಭೆ ಸೃಷ್ಟಿಸುವುದರ ಹಿಂದೆ ವ್ಯವಸ್ಥಿತ ಪಿತೂರಿ ಅಡಗಿದೆ ಎಂದು ಅನುಮಾನ ವ್ಯಕ್ತಪಡಿಸಿರುವ ಬೆಳಗಾವಿ ಸಂಸದ ಸುರೇಶ್ ಅಂಗಡಿ, ಗಲಭೆಕೋರರನ್ನು ದೇಶದ್ರೋಹಿಗಳೆಂದು ಕರೆದಿದ್ದಾರೆ.
Vijaya Karnataka Web Suresh Angadi
ಸಂಗ್ರಹ ಚಿತ್ರ


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಅಂಗಡಿ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿರುವ ಗಲಭೆಕೋರನ್ನು ದೇಶದ್ರೋಹಿಗಳೆನ್ನದೇ ಇನ್ನೇನು ಕರೆಯಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

'ಅಲ್ಲಲ್ಲಿ ಬೆಂಕಿ ಹಚ್ಚಿದ್ದು ಗಮನಿಸಿದರೆ ಇದೊಂದು ಅತ್ಯಂತ ಪೂರ್ವಯೋಜಿತ ಘಟನೆಯಾಗಿದೆ' : ಕಟೀಲ್

ಭಾರತದ ಅಭಿವೃದ್ಧಿ ಪಥವನ್ನು ಇಡೀ ವಿಶ್ವ ಕಣ್ತೆರೆದು ನೋಡುತ್ತಿದೆ. ದೇಶದ ಆರ್ಥಿಕತೆ ಸುಧಾರಿಸಲು ದುಡಿಯುತ್ತಿರುವ ಪ್ರಧಾನಿ ಮೋದಿ ಅವರ ಪರಿಶ್ರಮದಿಂದಾಗಿ ಭಾರತಕ್ಕೆ ಜಾಗತಿಕ ಮನ್ನಣೆ ದೊರೆತಿದೆ. ಇದರಿಂದ ಅಸೂಯೆಗೊಳಗಾಗಿರುವ ಕೆಲವರು ಕೋಮು ಗಲಭೆಗಳನ್ನು ಸೃಷ್ಟಿಸಿ ಭಾರತದ ಹೆಸರಿಗೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸುರೇಶ್ ಅಂಗಡಿ ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಜನಪ್ರಿಯ ಆಡಳಿತ ಕೆಲವರಿಗೆ ಅಪಥ್ಯವಾಗಿದ್ದು, ಇದಕ್ಕೆ ಕೆಟ್ಟ ಹಸೆರು ತರಲೆಂದೇ ಕೋಮು ಭಾವನೆಗಳನ್ನು ಕೆರಳಿಸಲಾಗುತ್ತಿದೆ ಎಂದು ಬೆಳಗಾವಿ ಸಂಸದರು ಗಂಭೀರ ಆರೋಪ ಮಾಡಿದರು.

'ಇದೊಂದು ಪೂರ್ವ ನಿಯೋಜಿತ ಕೃತ್ಯ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ': ಗೃಹ ಸಚಿವ

ಪೊಲೀಸ್ ಠಾಣೆ ಹಾಗೂ ಆಸ್ಪತ್ರೆಗಳಂತ ಸಾರ್ವಜನಿಕ ಸ್ಥಳಗಳಿಗೆ ಬೆಂಕಿ ಹಚ್ಚಿರುವವರು ದೇಶದ್ರೋಹಿಗಳಾಗಿರಲು ಮಾತ್ರ ಸಾಧ್ಯ ಎಂದಿರುವ ಸುರೇಶ್ ಅಂಗಡಿ, ಕೊರೊನಾ ವಾರಿಯರ್‌ಗಳಂತೆ ಕೆಲಸ ಮಾಡುತ್ತಿರುವ ಮಾಧ್ಯಮ ಪ್ರತಿನಿಧಗಳ ಮೇಲೂ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಹರಿಹಾಯ್ದರು.

ವಿನಾಕಾರಣ ಗಲಭೆ ಸೃಷ್ಟಿಸಿ ಅಶಾಂತಿಗೆ ಕಾರಣವಾಗಿರುವ ಈ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಸುರೇಶ್ ಅಂಗಡಿ, ಜನ ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.

'ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು': ಹೆಚ್‌ಡಿಕೆ

ಒಟ್ಟಿನಲ್ಲಿ ಬೆಂಗಳೂರಿನ ಕೆಜಿ ಹಳ್ಳಿ ಹಿಂಸಾತ್ಮಕ ಪ್ರತಿಭಟನೆಗೆ ಸಾರ್ವತ್ರಿಕವಾಗಿ ಆಕ್ರೋಶ ವ್ಯಕ್ತವಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ