ಆ್ಯಪ್ನಗರ

ಶರದ್‌ ಪವಾರಗೆ ಇಡಿ ನೋಟಿಸ್‌ ಖಂಡಿಸಿ ಬೆಳಗಾವಿಯಲ್ಲಿ ಎಂಇಎಸ್ ಪ್ರತಿಭಟನೆ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್‌ ನೀಡಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆದಿದೆ. ಇಡಿ ಅಧಿಕಾರಿಗಳು ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Vijaya Karnataka 30 Sep 2019, 8:11 pm
ಬೆಳಗಾವಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್‌ ನೀಡಿರುವುದನ್ನು ಖಂಡಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಮುಖಂಡರು ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web sharad pawar


ಮಹಾರಾಷ್ಟ್ರ ಹಾಗೂ ಕೇಂದ್ರದ ಬಿಜೆಪಿ ಸರಕಾರಗಳು ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿವೆ. ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ವಿಪಕ್ಷ ನಾಯಕರ ಮೇಲೆ ವಿನಾಕಾರಣ ಇಡಿ, ಐಟಿ ಅಧಿಕಾರಿಗಳ ಮೂಲಕ ದಾಳಿ ನಡೆಸುತ್ತಿವೆ. ತನಿಖೆ ನೆಪದಲ್ಲಿ ಹೆದರಿಸುವ ತಂತ್ರ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸರಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇಡಿ, ಐಟಿ ಅಧಿಕಾರಿಗಳ ಮೂಲಕ ಶರದ್‌ ಪವಾರ ಅವರಿಗೆ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಕೂಡಲೇ ಇಡಿ ಅಧಿಕಾರಿಗಳು ನೀಡಿರುವ ನೋಟಿಸ್‌ ವಾಪಸ್‌ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಎಂಇಎಸ್‌ ಮುಖಂಡರಾದ ದೀಪಕ ದಳವಿ, ಅರವಿಂದ ಪಾಟೀಲ, ಸರಸ್ವತಿ ಪಾಟೀಲ ಮತ್ತಿತರರು ಇದ್ದರು.

ಲಕ್ಷ ರೂ ಬೆಳೆ ನಷ್ಟಕ್ಕೆ ಕೇವಲ 3 ಸಾವಿರ ರೂ ಪರಿಹಾರ: ಸಂತ್ರಸ್ತರು ಕಂಗಾಲು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ