ಆ್ಯಪ್ನಗರ

ಬಿಜೆಪಿ ಬೋರ್ಡ್‌ ಹಾಕಿಕೊಂಡು ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ!

ಬಿಜೆಪಿ ಸರಕಾರದಲ್ಲಿ ಶೇ.40ರಷ್ಟು ಪರ್ಸಂಟೇಜ್‌ ಫಿಕ್ಸ್‌ ಮಾಡಲಾಗಿದೆ. ಬಿಜೆಪಿ ಸರಕಾರದ ಭ್ರಷ್ಟಾಚಾರಕ್ಕೆ ಬೇಸತ್ತು ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಇಂಥ ಭ್ರಷ್ಟಾಚಾರ ಪಕ್ಷಕ್ಕೆ ಬೆಂಬಲ ನೀಡುವುದು ಬಿಟ್ಟು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

Vijaya Karnataka 29 Nov 2021, 10:55 pm
ಚಿಕ್ಕೋಡಿ: ಶಾಸಕ ರಮೇಶ್‌ ಜಾರಕಿಹೊಳಿ ಬಿಜೆಪಿ ಬೋರ್ಡ್‌ ಹಾಕಿ ಕೊಂಡು ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ ಪರ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ಮುಖಂಡರನ್ನು ಭೇಟಿಯಾಗುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ. ಇಂಥ ವಿಷಯಗಳಿಗೆ ಕಾರ್ಯ ಕರ್ತರು ಕಿವಿ ಗೊಡದೆ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.
Vijaya Karnataka Web ಸತೀಶ್‌ ಜಾರಕಿಹೊಳಿ
ಸತೀಶ್‌ ಜಾರಕಿಹೊಳಿ


ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿಸೋಮವಾರ ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪ್ರಚಾರಾರ್ಥ ಏರ್ಪಡಿಸಿದ್ದ ಚಿಕ್ಕೋಡಿ ಮತಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಬ್ಲ್ಯಾಕ್ ಮೇಲ್ ಮಾಡುವರಿಗೆ ಹೆದರಿ ಬಿಜೆಪಿ ಸರಕಾರ ನಡೆಸುತ್ತುರುವುದು ಬಹಳ ಸಂತೋಷ: ಡಿಕೆ ಶಿವಕುಮಾರ್

‘ಅಭಿವೃದ್ಧಿ ಮುಖ್ಯವೇ ಹೊರತು ಭಾಷಣವಲ್ಲ, ಕಾಂಗ್ರೆಸ್‌ ಅಭ್ಯರ್ಥಿಯನ್ನು ಸೋಲಿಸಲು ವಿರೋಧ ಪಕ್ಷಗಳು ಅಪ್ರಚಾರ ಮಾಡುತ್ತಿವೆ. ನಿಷ್ಠಾವಂತ, ಪ್ರಾಮಾಣಿಕ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆ. ಮೂರು ವರ್ಷದಲ್ಲಿ ಮೂರು ಗಂಭೀರ ಅವಘಡಗಳನ್ನು ಈ ಭಾಗದ ಜನರು ಎದುರಿಸಿದ್ದಾರೆ. ಆದರೂ, ಕೇಂದ್ರ ಮತ್ತು ರಾಜ್ಯ ಸರಕಾರ ಜನರ ಕಣ್ಣೀರು ಒರೆಸಲಿಲ್ಲ. ಪ್ರವಾಹದಿಂದ ಸಾವಿರಾರು ಜನರು ಬೀದಿ ಪಾಲಾಗಿದರೂ ಅವಾ ಗಲೂ ಬಿಜೆಪಿಯವರೂ ಜನರಿಗೆ ಮುಖ ತೋರಿಸಲಿಲ್ಲ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ದಂಡು ಬೆಳಗಾವಿಗೆ ಬಂದಿದೆ’’ ಎಂದು ಸತೀಶ್ ಜಾರಕಿಹೊಳಿ ಕಿಡಿಕಾರಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಬೆಳಗಾವಿ ಜಿಲ್ಲೆಉಸ್ತುವಾರಿ ಐವಾನ್ ಡಿಸೋಜಾ ಮಾತನಾಡಿ, ''ಬಿಜೆಪಿ ಸರಕಾರದಲ್ಲಿ ಶೇ.40ರಷ್ಟು ಪರ್ಸಂಟೇಜ್‌ ಫಿಕ್ಸ್‌ ಮಾಡಲಾಗಿದೆ. ಬಿಜೆಪಿ ಸರಕಾರದ ಭ್ರಷ್ಟಾಚಾರಕ್ಕೆ ಬೇಸತ್ತು ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಇಂಥ ಭ್ರಷ್ಟಾಚಾರ ಪಕ್ಷಕ್ಕೆ ಬೆಂಬಲ ನೀಡುವುದು ಬಿಟ್ಟು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ'' ಎಂದು ತಿಳಿಸಿದರು.

ಶಾಸಕಿ ಲಕ್ಮಿ ಹೆಬ್ಬಾಳ್ಕರ್‌, ''ಕಾಂಗ್ರೆಸ್‌ ಮಾಡಿರುವ ಸರಕಾರಿ ಆಸ್ತಿಯನ್ನು ಮಾರಾಟ ಮಾಡುವುದು ಬಿಜೆಪಿ ಕೊಡುಗೆಯಾಗಿದೆ'' ಎಂದು ಆರೋಪಿಸಿದರು.

ರಮೇಶ್ ಕಾಂಗ್ರೆಸ್‌ಗೆ ಮೋಸ ಮಾಡಿದ್ದಾರೆ ಎಂದು ಹೆಬ್ಬಾಳ್ಕರ್‌ಗೆ ಈಗ ಗೊತ್ತಾಗಿದೆ: ಈಶ್ವರಪ್ಪ ವ್ಯಂಗ್ಯ!

ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಶಾಸಕ ಗಣೇಶ ಹುಕ್ಕೇರಿ, ಮಾಜಿ ಶಾಸಕರಾದ ವೀರಕುಮಾರ ಪಾಟೀಲ, ಕಾಕಾಸಾಹೇಬ ಪಾಟೀಲ, ಎ.ಬಿ. ಪಾಟೀಲ ಮಾತನಾಡಿದರು. ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷ ಲಕ್ಷ ್ಮಣರಾವ ಚಿಂಗಳೆ, ಮಹಾವೀರ ಮೋಹಿತೆ, ಅನಿಲ್‌ ಪಾಟೀಲ, ಮಲ್ಲಿಕಾರ್ಜುನ ಪಾಟೀಲ, ಸತೀಶ್‌ ಪಾಟೀಲ, ರಾಜೇಂದ್ರ ಕರಾಳೆ, ಸಾಬೀರ ಜಮಾದಾರ, ಮುದ್ದಸರ ಜಮಾದಾರ, ದೂಳಗೌಡ ಪಾಟೀಲ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ