ಆ್ಯಪ್ನಗರ

ಡೆಂಗೆ ಜ್ವರಕ್ಕೆ ಬಾಲಕ ಬಲಿ

ಸವದತ್ತಿ (ಬೆಳಗಾವಿ): ಇಲ್ಲಿನ ಕೆಎಲ್‌ಇ ಸಂಸ್ಥೆಯ ಆಂಗ್ಲಮಾಧ್ಯಮ ಶಾಲೆಯ 5ನೇ ವರ್ಗದ ...

Vijaya Karnataka 5 Oct 2019, 5:00 am
ಸವದತ್ತಿ (ಬೆಳಗಾವಿ): ಇಲ್ಲಿನ ಕೆಎಲ್‌ಇ ಸಂಸ್ಥೆಯ ಆಂಗ್ಲಮಾಧ್ಯಮ ಶಾಲೆಯ 5ನೇ ವರ್ಗದ ವಿದ್ಯಾರ್ಥಿ ಡೆಂಗೆ ಜ್ವರದಿಂದ ಮೃತಪಟ್ಟಿದ್ದಾನೆ.
Vijaya Karnataka Web 4SDT3_53


ಮೊಕಾಶಿ ಓಣಿಯ ನಿವಾಸಿ ಚೇತನ್‌ ಬಾಳಪ್ಪ ಬಾಳೋಜಿ (11) ಮೃತ ಬಾಲಕ. ಕಳೆದ ನಾಲ್ಕು ದಿನಗಳ ಹಿಂದೆ ಡೆಂಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿಬಾಲಕನನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಗುರುವಾರ ಮೃತಪಟ್ಟಿದ್ದಾನೆ.

ಸೂಕ್ತ ಕ್ರಮಕ್ಕೆ ಆಗ್ರಹ: ಪಟ್ಟಣದಲ್ಲಿಸಾಕಷ್ಟು ಮಕ್ಕಳು ಡೆಂಗೆ ಜ್ವರದಿಂದ ಬಳಲುತ್ತಿದ್ದಾರೆ. ಜೀವಕ್ಕೆ ಮಾರಕವಾಗಿರುವ ಈ ರೋಗ ನಿಯಂತ್ರಣಕ್ಕಾಗಿ ಪುರಸಭೆ ಮತ್ತು ಆರೋಗ್ಯ ಇಲಾಖೆ ಸ್ವಚ್ಛತೆಯ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿನ ಗಿಡ ಗಂಟಿಗಳು, ಚರಂಡಿಗಳಲ್ಲಿನ ತ್ಯಾಜ್ಯ ತೆಗೆದು ಪರಿಸರ ಸ್ವಚ್ಛವಾಗಿಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ