ಆ್ಯಪ್ನಗರ

ಜಮ್ಮು, ಕಾಶ್ಮೀರಕ್ಕೆ ವಿಶೇಷ ಸ್ಥಾನ ರದ್ದು; ಸಂಭ್ರಮಾಚರಣೆ

ಬೆಳಗಾವಿ: ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನ ರದ್ದು ...

Vijaya Karnataka 6 Aug 2019, 5:00 am
ಬೆಳಗಾವಿ: ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನ ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಮಹಾನಗರ ಬಿಜೆಪಿ ಘಟಕದ ಕಾರ್ಯಕರ್ತರು ಸೋಮವಾರ ನಗರದ ಚನ್ನಮ್ಮ ವೃತ್ತದ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
Vijaya Karnataka Web BEL-5 LBS 5


ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ ಮಾತನಾಡಿ, ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370 ಹಾಗೂ 35ಎ ಕಲಂ ರದ್ದು ಪಡಿಸುವ ಮೂಲಕ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ ಒಂದಾಗಬೇಕು ಎನ್ನುವ ಬಿಜೆಪಿ, ಹಿಂದೂಪರ ಸಂಘಟನೆಗಳ ಬಹುದಿನಗಳ ಬೇಡಿಕೆಯಾಗಿತ್ತು. ಜತೆಗೆ ಅನೇಕ ಸಂಘಟನೆಗಳು ಹೋರಾಟ ಮಾಡಿದ್ದವು. ಅದರಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹೋರಾಟಗಾರರ ತ್ಯಾಗ, ಬಲಿದಾನಕ್ಕೆ ಗೌರವ ನೀಡಿದೆ. ದೇಶದಲ್ಲಿ ಒಂದೇ ಕಾನೂನು ಇರಬೇಕು. ಅದನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದರು.

ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ರಾಜು ಚಿಕ್ಕನಗೌಡರ ಮಾತನಾಡಿ, ಅನೇಕ ವರ್ಷಗಳಿಂದ ಭಾರತದ ಅವಿಭಾಜ್ಯ ಅಂಗವಾಗಿರುವ ಕಾಶ್ಮೀರದಲ್ಲಿನ ವಿಶೇಷ ಸ್ಥಾನಮಾನ ರದ್ದುಗೊಳಿಸಬೇಕೆಂದು ದೇಶದ ಜನರ ಬಯಕೆಯಾಗಿತ್ತು. ಇಂದು ಕೇಂದ್ರ ಸರಕಾರದ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಕಾಶ್ಮೀರ ಸಹ ಇತರೆ ರಾಜ್ಯಗಳಂತೆ ಇರಲಿದೆ ಎಂದರು.

ಮಹಾನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಕಿರಣ ಜಾಧವ, ಮಹಾಂತೇಶ ವಕ್ಕುಂದ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ