ಆ್ಯಪ್ನಗರ

ಕಾರು ಡಿಕ್ಕಿ; ಮಹಿಳೆ ಸಾವು

ತಾಲೂಕಿನ ಬಸವನ ಕುಡಚಿ ಗ್ರಾಮದ ಬಳಿ ...

Vijaya Karnataka 26 Nov 2019, 5:00 am
ಬೆಳಗಾವಿ: ತಾಲೂಕಿನ ಬಸವನ ಕುಡಚಿ ಗ್ರಾಮದ ಬಳಿ ಭಾನುವಾರ ರಾತ್ರಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟಿದ್ದಾಳೆ.
Vijaya Karnataka Web car collision death of a woman
ಕಾರು ಡಿಕ್ಕಿ; ಮಹಿಳೆ ಸಾವು


ಬಸವನ ಕುಡಚಿ ಗ್ರಾಮದ ಯಲ್ಲುಬಾಯಿ ಮಲ್ಲಪ್ಪ ಬೇಡಕಾ(50) ಮೃತ ಮಹಿಳೆ. ಬೆಳಗಾವಿ ನಗರಕ್ಕೆ ಬಂದಿದ್ದ ಯಲ್ಲುಬಾಯಿ ದಿನನಿತ್ಯ ಬಳಕೆ ಸಾಮಗ್ರಿಗಳನ್ನು ಖರೀದಿಸಿ ಮರಳಿ ಸಿಟಿ ಬಸ್‌ ಮೂಲಕ ಬಸವನ ಕುಡಚಿ ಗ್ರಾಮ ಬಂದಿಳಿದಿದ್ದರು. ಈ ಸಂದರ್ಭದಲ್ಲಿಬೆಳಗಾವಿ-ಬಾಗಲಕೋಟೆ ಹೆದ್ದಾರಿ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಉತ್ತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ