ಬೆಳಗಾವಿ: ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಗೆ ಬೆಳಗಾವಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ತೆರೆಯಲಾಗಿರುವ 34 ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮರಾ ಅಳವಡಿಕೆ ಕಾರ್ಯ ಪೂರ್ಣಗೊಂಡಿರುವುದಾಗಿ ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಡಿ. ಕಾಂಬಳೆ ತಿಳಿಸಿದ್ದಾರೆ. ಪರೀಕ್ಷೆಗಳು ಮಾ. 1 ರಿಂದ 17ರವರೆಗೆ ಜರುಗಲಿದ್ದು, ಪೂರ್ವ ಸಿದ್ಧತೆಗಳೆಲ್ಲವೂ ಮುಗಿದಿವೆ. ಜಿಲ್ಲಾಧಿಕಾರಿಗಳು ಈ ವಾರದಲ್ಲಿ ಸಭೆ ನಡೆಸಿ ಪರಿಶೀಲಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಿರುವುದಾಗಿ ಹೇಳಿದ್ದಾರೆ. 23,517 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ತಗೆದುಕೊಂಡಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮರಾ ಅಳವಡಿಕೆ
ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಗೆ ಬೆಳಗಾವಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ತೆರೆಯಲಾಗಿರುವ 34 ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮರಾ ಅಳವಡಿಕೆ ಕಾರ್ಯ ...
Vijaya Karnataka 27 Feb 2018, 5:00 am