ಆ್ಯಪ್ನಗರ

ಚನ್ನಮ್ಮ ವಿವಿ ಸ್ಥಳಾಂತರ ಬೇಡ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಸ್ಥಳಾಂತರ ಮಾಡದಂತೆ ಭೂತರಾಮನಟ್ಟಿ ...

Vijaya Karnataka 12 Oct 2019, 5:00 am
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಸ್ಥಳಾಂತರ ಮಾಡದಂತೆ ಭೂತರಾಮನಟ್ಟಿ ಗ್ರಾಮಸ್ಥರು ಕುಲಪತಿ ಎಂ. ರಾಮಚಂದ್ರಗೌಡ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web 11 LBS 4_53


ಭೂತರಾಮನಟ್ಟಿ ಗ್ರಾಮದ ಗೋಮಾಳ ಜಾಗದಲ್ಲಿ1986ರಲ್ಲಿಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್‌ ಆರಂಭಿಸಿ ಬಳಿಕ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಆರಂಭಿಸಲಾಗಿದೆ. ಈ ಪ್ರದೇಶ ಅರಣ್ಯ ಇಲಾಖೆಗೆ ಒಳಪಡುತ್ತದೆ ಎಂದು ಹೇಳಲಾಗುತ್ತಿದೆ. ಅರಣ್ಯ ಇಲಾಖೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಈ ಕುರಿತು ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆಅವರನ್ನು ಭೇಟಿ ಮಾಡಲಾಗುವುದು. ಅಲ್ಲದೇ ವಿಶ್ವವಿದ್ಯಾಲಯ ಸ್ಥಳಾಂತರಕ್ಕೆ ಯಾವುದೇ ಕ್ರಮಕೈಗೊಳ್ಳಬಾರದು ಎಂದು ಒತ್ತಾಯಿಸಿದರು.

ಗ್ರಾಮಸ್ಥರಾದ ಭೀಮಗೌಡ ಪಾಟೀಲ, ಮಾರುತಿ ಚೌಗಲೆ, ಅಶೋಕ ಪಾಟೀಲ, ಮಾರುತಿ ಪಾಟೀಲ, ಈರಪ್ಪ ಪಾಟೀಲ, ಪ್ರಕಾಶ ಕಮತಿ, ಆನಂದ ಚೌಗಲೆ, ಮಾರುತಿ ಕಮತಿ, ಪ್ರಮೋದ ಜಿಂವಗೋಳ, ಸುನೀಲ ದುರ್ಗಾಯಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ