ಆ್ಯಪ್ನಗರ

ಪೊಲೀಸ್‌ ಭದ್ರತೆಯಲ್ಲಿ ಡಬ್ಬಾ ಅಂಗಡಿಗಳ ತೆರವು

ಸವದತ್ತಿ : ಪಟ್ಟಣದ ತಾಲೂಕು ಕ್ರೀಡಾಂಗಣದ ಎದುರಿನ ರಸ್ತೆಯ ಎರಡೂ ಬದಿಯಲ್ಲಿದ್ದ ಅನಧಿಕೃತ ಡಬ್ಬಾ ಅಂಗಡಿಗಳನ್ನು ಪುರಸಭೆ ವತಿಯಿಂದ ಸೋಮವಾರ ಪೊಲೀಸ್‌ ...

Vijaya Karnataka 4 Jun 2019, 5:00 am
ಸವದತ್ತಿ : ಪಟ್ಟಣದ ತಾಲೂಕು ಕ್ರೀಡಾಂಗಣದ ಎದುರಿನ ರಸ್ತೆಯ ಎರಡೂ ಬದಿಯಲ್ಲಿದ್ದ ಅನಧಿಕೃತ ಡಬ್ಬಾ ಅಂಗಡಿಗಳನ್ನು ಪುರಸಭೆ ವತಿಯಿಂದ ಸೋಮವಾರ ಪೊಲೀಸ್‌ ಭದ್ರತೆಯಲ್ಲಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು.
Vijaya Karnataka Web BEL-3SDT2


ರಸ್ತೆ ಪಕ್ಕದ ಎರಡೂ ಬದಿಯಲ್ಲಿ ಡಬ್ಬಾ ಅಂಗಡಿಗಳನ್ನು ಇಟ್ಟಿರುವುದರಿಂದ ಸಾರ್ವಜನಿಕರಿಗೆ ಅನನುಕೂಲವಾಗುತ್ತಿರುವುದನ್ನು ಗಮನಿಸಿ ಹಾಗೂ ಸಾರ್ವಜನಿಕರ ಆಕ್ಷೇಪಣೆ ಮತ್ತು ಹೈಕೋರ್ಟ್‌ ನಿರ್ದೇಶನದಂತೆ ತೆರವುಗೊಳಿಸಲಾಗಿದೆ ಎಂದು ಮುಖ್ಯಾಧಿಕಾರಿ ಎ.ಬಿ.ಕಲಾಲ 'ವಿಜಯ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.

ತಾಲೂಕು ಕ್ರೀಡಾಂಗಣದ ಈಶಾನ್ಯ ಮೂಲೆಯಿಂದ ಸುಮಾರು 500 ಮೀ. ದೂರದ ಗುರ್ಲಹೊಸೂರ ಚಿದಂಬರೇಶ್ವರ ದೇವಸ್ಥಾನದ ಹನಮಂತ ದೇವರ ಗುಡಿಯವರೆಗೆ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ಕಾರ್ಯಾಚರಣೆಯಲ್ಲಿ ಸುಮಾರು 30 ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಅಂಗಡಿಗಳನ್ನು ಆಯಾ ಮಾಲೀಕರಿಗೆ ಒಪ್ಪಿಸಲಾಗಿದೆ ಎಂದು ಆರೋಗ್ಯ ನಿರೀಕ್ಷ ಕ ಪ್ರಕಾಶ ಮಠದ ಹಾಗೂ ಎಂಜಿನಿಯರ್‌ ನಿರ್ಮಲಾ ನಾಯ್ಕರ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ