ಆ್ಯಪ್ನಗರ

‘ಯಡಿಯೂರಪ್ಪ ಸರ್ಕಾರ ಉಳಿಸಿಕೊಳ್ಳಲು ಭಜನೆ ಮಾಡ್ತಾ ಕೂತಿದ್ದಾರೆ’- ಸಿದ್ದರಾಮಯ್ಯ ವಾಗ್ದಾಳಿ

ಸಿಎಂ ಬಿಎಸ್‌ ಯಡಿಯೂರಪ್ಪ ಸರಕಾರ ಉಳಿಸಿಕೊಳ್ಳಲು ಭಜನೆ ಮಾಡುತ್ತಾ ಕೂತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಸಮೀಕ್ಷೆಗಳಲ್ಲಿ ನಂಬಿಕೆ ಇಲ್ಲ ಎಂದರು.

Vijaya Karnataka Web 8 Dec 2019, 1:30 pm
ಬೆಳಗಾವಿ: ಸಿಎಂ ಬಿ.ಎಸ್ ಯಡಿಯೂರಪ್ಪ ಸರಕಾರವನ್ನು ಉಳಿಸಿಕೊಳ್ಳಲು ಭಜನೆ ಮಾಡುತ್ತಾ ಕೂತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರಿಗೆ ಪ್ರವಾಹ ಪರಿಹಾರ ನೀಡಲು ಸರಕಾರ ಮುಂದಾಗುತ್ತಿಲ್ಲ. ಜನರ ಸಮಸ್ಯೆಯ ಬಗ್ಗೆ ತಲೆಕೆಡಿಸಿಕೊಳ್ಳಬೇಕಾದ ಸಿಎಂ ಬಿಎಸ್‌ವೈ ಸರಕಾರವನ್ನು ಉಳಿಸಿಕೊಳ್ಳಲು ಭಜನೆ ಮಾಡುತ್ತಾ ಕೂತಿದ್ದಾರೆ ಎಂದು ಹರಿಹಾಯ್ದರು.
Vijaya Karnataka Web congress leader siddaramaiah slams at bjp
‘ಯಡಿಯೂರಪ್ಪ ಸರ್ಕಾರ ಉಳಿಸಿಕೊಳ್ಳಲು ಭಜನೆ ಮಾಡ್ತಾ ಕೂತಿದ್ದಾರೆ’- ಸಿದ್ದರಾಮಯ್ಯ ವಾಗ್ದಾಳಿ


ಪ್ರವಾಹ ಪರಿಹಾರ ನೀಡುವಂತೆ ಸಿಎಂ ಬಿಎಸ್‌ವೈ ಕೇಂದ್ರ ಸರಕಾರವನ್ನು ಒತ್ತಾಯಿಸಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವರಲ್ಲಿ ಬೇಡಿಕೆ ಇಡಬೇಕು. ಆದರೆ ಅದನ್ನು ಬಿಎಸ್‌ವೈ ಮಾಡುತ್ತಿಲ್ಲ. ಹೀಗಾದರೆ ರಾಜ್ಯದ ಜನರ ಪರಿಸ್ಥಿತಿಗೆ ದೇವರೆ ಗತಿ ಎಂದು ಕಿಡಿಕಾರಿದರು.

ಉಪಚುನಾವಣಾ ಫಲಿತಾಂಶದ ಕುರಿತಾಗಿ ಮಾತನಾಡಿದ ಸಿದ್ದರಾಮಯ್ಯ, ಸಮೀಕ್ಷೆಗಳಲ್ಲಿ ನಂಬಿಕೆ ಇಲ್ಲ. ಮತ ಎಣಿಕೆ ಆಗದೇ ಎಷ್ಟು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ಎಣಿಕೆ ನಡೆದ ಮೇಲೆಯೇ ಚುನಾವಣಾ ಫಲಿತಾಂಶದ ಸತ್ಯ ಗೊತ್ತಾಗಲಿದೆ ಎಂದರು.

ಉಪಚುನಾವಣಾ ಫಲಿತಾಂಶದ ಬಳಿಕ ಮುಂದೇನು ?-ಬಿಎಸ್‌ವೈ ಅನುಪಸ್ಥಿತಿಯಲ್ಲಿ ಬಿಜೆಪಿ ಪ್ರಮುಖರ ಸಭೆ !

ಇದೇ ವೇಳೆ ಉಪಚುನಾವಣಾ ಫಲಿತಾಂಶದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಕಥೆ ಮುಗಿಯಿತು ಎಂಬ ಬಿಜೆಪಿ ಮುಖಂಡರಾದ ಜಗದೀಶ್ ಶೆಟ್ಟರ್ ಹಾಗೂ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್ ಹಾಗೂ ಈಶ್ವರಪ್ಪ ಅವರು ಭ್ರಮೆಯಲ್ಲಿದ್ದಾರೆ.

ಕಾಂಗ್ರೆಸ್ ಮುಕ್ತ ಭಾರತ ಬಿಜೆಪಿ ಮುಖಂಡರು ಹೇಳಿಕೆ ನೀಡಿದ್ದರು ಆದರೆ ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಕಾಂಗ್ರೆಸ್ ಕಥೆ ಏನಾಯಿತು ಎಂಬುವುದೇ ಇದಕ್ಕೆ ಉತ್ತರ. ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಯಾರಿದಂಲೂ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ಉಪ ಚುನಾವಣೆಯಲ್ಲಿ 15ರಲ್ಲಿ ಬಿಜೆಪಿಗೆ 13 ಸ್ಥಾನ: ಬಿಎಸ್‌ವೈ ವಿಶ್ವಾಸ

ನನ್ನನ್ನು ಕಂಡರೆ ಬಿಜೆಪಿ ಹಾಗೂ ಜೆಡಿಎಸ್‌ಗೆ ಭಯ. ಅದಕ್ಕೆ ನನ್ನ ಹೆಸರು ಪದೇ ಪದೇ ಪ್ರಸ್ತಾಪ ಮಾಡುತ್ತಾರೆ. ಟಿ.ಆರ್.ಪಿ ಜಾಸ್ತಿ ಎಂಬ ಕಾರಣಕ್ಕಾಗಿ ಟಿವಿಯಲ್ಲಿ ನನ್ನ ಹೆಸರು ಪ್ರಸ್ತಾಪ ಜಾಸ್ತಿ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಕುಟುಕಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ