ಆ್ಯಪ್ನಗರ

ಬಾವನಸೌಂದತ್ತಿ ಭಾಗದಲ್ಲಿ ಮುಂದುವರಿದ ಧಾರಾಕಾರ ಮಳೆ

ಬಾವನಸೌಂದತ್ತಿ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಈ ...

Vijaya Karnataka 20 Oct 2019, 5:00 am
ಬಾವನಸೌಂದತ್ತಿ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಈ ಭಾಗದ ಬಾಂದಾರ ಮತ್ತು ಕೆರೆಕಟ್ಟೆಗಳು ತುಂಬಿ ತುಳುಕುತ್ತಿದ್ದು ತಗ್ಗು ಪ್ರದೇಶಗಳಲ್ಲಿನೀರು ತುಂಬಿದೆ. ಶನಿವಾರ ಸತತ ಮಳೆ ಮುಂದುವರಿದಿದ್ದು, ಕೆಲವೆಡೆ ಸಾಧಾರಣ ಮಳೆಯಾಗಿದೆ.
Vijaya Karnataka Web 19 BSDT 01 (1)_53


ನಂದಿಕುರಳಿ ಗ್ರಾಮದಲ್ಲಿರುವ ಕೆರೆ ತುಂಬಿ ನೀರು ಉಕ್ಕುತ್ತಿದ್ದು, ಗ್ರಾಪಂ ಬಳಿಯ ಬ್ರಿಜ್‌ ಮತ್ತು ಬಾಂದಾರದ ಮೇಲೆ ಹರಿಯುತ್ತಿರುವ ನೀರಿನ ರಭಸಕ್ಕೆ ರಸ್ತೆ ಕಿತ್ತು ಹೋಗಿದೆ. ನಸಲಾಪುರ, ಬಾವನಸೌಂದತ್ತಿ, ದಿಗ್ಗೇವಾಡಿ, ಗುಂಡವಾಡ, ಶಿರಗೂರ, ಭಿರಡಿ, ಚಿಂಚಲಿ, ಮೊರಬ ಸೇರಿದಂತೆ ಬಹುತೇಕ ಎಲ್ಲೆಡೆ ಧಾರಾಕಾರ ಮಳೆ ಸುರಿದಿದೆ.

ನದಿ ತೀರದ ಜನರು ಪ್ರವಾಹ ಸಂಕಷ್ಟದಿಂದ ಹೊರ ಬರುತ್ತಿದ್ದಂತೆ, ಮತ್ತೆ ಈಗ ಸುರಿಯುತ್ತಿರುವ ಮಳೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ. ಈಗ ಸುರಿಯುತ್ತಿರುವ ಮಳೆಯಿಂದ ಪ್ರವಾಹದಲ್ಲಿಮುಳುಗಿದ್ದ ಅಳಿದುಳಿದ ಮನೆಗಳು ಸಹ ಕುಸಿದು ಬೀಳುತ್ತಿವೆ.

ಅಲ್ಪಾವಧಿ ಬೆಳೆಗಳಾದ ಗೋವಿನ ಜೋಳ, ಶೇಂಗಾ, ಸೋಯಾಬೀನ್‌ ಬೆಳೆಗಳ ಮೇಲೆ ದುಷ್ಪರಿಣಾಮ ಬೀರುವ ಆತಂಕ ರೈತರಲ್ಲಿಮನೆ ಮಾಡಿದೆ. ಇದೇ ರೀತಿ ಮೋಡ ಕವಿದ ವಾತಾವರಣ ಮುಂದುವರಿದರೆ ಬೆಳೆಗಳಿಗೆ ರೋಗ ಹರಡುವ ಭಯ ರೈತರನ್ನು ಕಾಡುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ