ಆ್ಯಪ್ನಗರ

ಭೂ ದಾಖಲೆ ಕಚೇರಿಯಲ್ಲಿ ಭ್ರಷ್ಟಾಚಾರ: ಪ್ರತಿಭಟನೆ

ಬೆಳಗಾವಿ : ನಗರದ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಲಂಚ ನೀಡದಿದ್ದರೆ ಸಾರ್ವಜನಿಕರ ಕೆಲಸ, ಕಾರ್ಯಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ...

Vijaya Karnataka 4 Dec 2018, 5:00 am
ಬೆಳಗಾವಿ: ನಗರದ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಲಂಚ ನೀಡದಿದ್ದರೆ ಸಾರ್ವಜನಿಕರ ಕೆಲಸ, ಕಾರ್ಯಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಸಾಮಾಜಿಕ ಸಂಸ್ಥೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-3 LBS 7


ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಯಾವುದೇ ಸೇವೆಗಳಿಗಾಗಿ, ಅಂತರಜಾಲದಲ್ಲಿ ಅರ್ಜಿ ತುಂಬಲು ಅವಕಾಶ ಕಲ್ಪಿಸಲಾಗಿದೆ. ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗೆ ಲಂಚ ನೀಡಿದರೆ ಮಾತ್ರ ಕೆಲಸ, ಕಾರ್ಯ ಮಾಡಿ ಕೊಡುತ್ತಾರೆ. ಇಲ್ಲದಿದ್ದರೇ 3 ತಿಂಗಳಲ್ಲಿ ನೀಡಬೇಕಾದ ಸೌಲಭ್ಯವನ್ನು ವರ್ಷವಾದರೂ ಸಾರ್ವಜನಿಕರಿಗೆ ನೀಡುತ್ತಿಲ್ಲ. ಭೂದಾಖಲೆ, ನೋಂದಣಿ ಸೇರಿ ಇನ್ನಿತರೆ ಸೌಲಭ್ಯ ಪಡೆಯಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದಾರೆ. ಹಣ ನೀಡದ ಸಾರ್ವಜನಿಕರ ಅರ್ಜಿಗಳನ್ನು ತಿದ್ದುಪಡಿ ಅಥವಾ ಸೂಕ್ತ ದಾಖಲಾತಿ ಇಲ್ಲ ಎಂಬ ಕಾರಣಕ್ಕೆ ತಡೆ ಹಿಡಿಯುತ್ತಿದ್ದಾರೆ ಎಂದು ಆರೋಪಿಸಿದರು.

ಅಧಿಕಾರಿಗಳು ಸಾರ್ವಜನಿಕರಿಗೆ ಒದಗಿಸಬೇಕಾದ ಸೇವೆಯನ್ನು ಸಕಾಲಕ್ಕೆ ಒದಗಿಸದೇ ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ. ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಂಡು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ಸಂಸ್ಥೆಯ ಅಧ್ಯಕ್ಷ ನಾಮದೇವ ಮೋರೆ, ಉಪಾಧ್ಯಕ್ಷ ಶಿವಾಜಿ ಕಾಗ್ನೇಕರ, ಕಾರ್ಯದರ್ಶಿ ಆನಂದ ಮರಿ, ಸುನೀಲ ಜಾಧವ, ನಾಗೇಶ ಮಾನೆ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ