ಆ್ಯಪ್ನಗರ

ಬೆಳಗಾವಿಯಲ್ಲಿ ಭೀಕರ ಅಪಘಾತ: ಅಂತ್ಯ ಸಂಸ್ಕಾರಕ್ಕೆ ಹೋದ 6 ಮಂದಿ ದುರ್ಮರಣ

ಗೋಕಾಕ್ ತಾಲೂಕಿನ ಹೊರವಲಯದಲ್ಲಿ ಸಂಬಂಧಿಕರೊಬ್ಬರ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ತೆರಳುತ್ತಿದ್ದ 6 ಜನರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದ ಬಳಿ ಈ ಭೀಕರ ಅಪಘಾತ ನಡೆದಿದೆ. ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬುಲೆರೋದಲ್ಲಿ ಪ್ರಯಾಣಿಸುತ್ತಿದ್ದ ಇನ್ನುಳಿದ 8ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

Vijaya Karnataka Web 4 Dec 2018, 9:31 am
ಬೆಳಗಾವಿ: ಗೋಕಾಕ್ ತಾಲೂಕಿನ ಹೊರವಲಯದಲ್ಲಿ ಸಂಬಂಧಿಕರೊಬ್ಬರ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ತೆರಳುತ್ತಿದ್ದ 6 ಜನರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Vijaya Karnataka Web bel


ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದ ಬಳಿ ಈ ಭೀಕರ ಅಪಘಾತ ನಡೆದಿದೆ.

ಮಂಗಳವಾರ ಬೆಳಗ್ಗೆ 3ಕ್ಕೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಬುಲೇರೋ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬುಲೇರೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದ ಇನ್ನುಳಿದ 8ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಸವದತ್ತಿ ತಾಲೂಕಿನ ಮಾಡಮಗೇರಿ ಹಾಗೂ ಯರಜರವಿ ಗ್ರಾಮದ ನಿವಾಸಿಗಳಾದ ಗಂಗವ್ವ ಹುರಳಿ (30) ಕಾಶವ್ವ ಖಂಡ್ರಿ (70), ಯಲ್ಲವ್ವ ಪೂಜಾರಿ (45) ಯಲ್ಲವ್ವ ಗುಂಡಪ್ಪನವರ (40) ಹಾಗೂ ರೇಣುಕಾ ಸೊಪಾಡ್ಲ (35) ಮಲ್ಲವ್ವ ಖಂಡ್ರಿ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು. ಗೋಕಾಕ್ ಸಮೀಪ ಸಂಬಂಧಿಕರ ಅಂತ್ಯ ಸಂಸ್ಕಾರ ಕಾರ್ಯದಲ್ಲಿ ಪಾಲ್ಗೊಂಡು ಮರಳುವಾಗ ಈ ದುರ್ಘಟನೆ ಸಂಭವಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ