ಆ್ಯಪ್ನಗರ

ನಿಯಮ ಮೀರಿ ಶುಲ್ಕ ಸಂಗ್ರಹಿಸುವ ಶಿಕ್ಷ ಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಳಗಾವಿ: ನಿಯಮ ಮೀರಿ ಶುಲ್ಕ ಸಂಗ್ರಹಿಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ...

Vijaya Karnataka 1 Feb 2019, 5:00 am
ಬೆಳಗಾವಿ :ನಿಯಮ ಮೀರಿ ಶುಲ್ಕ ಸಂಗ್ರಹಿಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗುರುವಾರ ಮಾನವ ಹಕ್ಕು ಹಾಗೂ ಭ್ರಷ್ಟಾಚಾರ ವಿರೋಧಿ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
Vijaya Karnataka Web demand action against educational institutions collecting fees beyond the rules
ನಿಯಮ ಮೀರಿ ಶುಲ್ಕ ಸಂಗ್ರಹಿಸುವ ಶಿಕ್ಷ ಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹ


ಸರಕಾರಿ ಶಾಲೆಗಳಲ್ಲಿ ಶಿಕ್ಷಕ ಕೊರತೆ, ಮೂಲ ಸೌಲಭ್ಯವಿಲ್ಲದೆ ಬಡವರ್ಗದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ. ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯಬೇಕೆಂದರೆ ಶಾಲೆ ಸುಧಾರಣೆ ಶುಲ್ಕ, ದೇಣಿಗೆ ಸೇರಿದಂತೆ ನಾನಾ ಬಗೆಯ ಶುಲ್ಕ ಸಂಗ್ರಹಿಸಲಾಗುತ್ತಿದೆ. ಪ್ರವೇಶ ಶುಲ್ಕವನ್ನು ನಿಮಯ ಬಾಹಿರವಾಗಿ ಸಂಗ್ರಹಿಸಲಾಗುತ್ತಿದೆ. ಇದರಿಂದ ಬಡ ವರ್ಗದ ಮಕ್ಕಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯಲು ಆಗುತ್ತಿಲ್ಲ.

ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಸರಕಾರ ಹಿಡಿತ ಸಾಧಿಸಬೇಕು. ಬೇಕಾಬಿಟ್ಟಿಯಾಗಿ ಸಂಗ್ರಹಿಸುತ್ತಿರುವ ಶುಲ್ಕಕ್ಕೆ ಕಡಿವಾಣ ಹಾಕಬೇಕು. ಸರಕಾರದ ನಿಯಮ ಮೀರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಸರಕಾರಿ ಶಾಲೆಗಳ ಸುಧಾರಣೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸರಕಾರಿ ಶಾಲೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಶಿಕ್ಷಕರ ನೇಮಕಾತಿ ಮಾಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ಸಮಿತಿ ಅಧ್ಯಕ್ಷ ರಾಘವೇಂದ್ರ ಪಿಟಗಿ, ಮೋಹನ ಆರ್‌.ಎನ್‌. ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ