ಆ್ಯಪ್ನಗರ

ಬೆಳೆ ಹಾನಿಗೆ ಪರಿಹಾರ ನೀಡಲು ಆಗ್ರಹ

ಬೆಳಗಾವಿ: ಹಿಂಗಾರು ಹಂಗಾಮಿನ ಬೆಳೆ ಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಸೋಮವಾರ ಅಖಂಡ ಕರ್ನಾಟಕ ರೈತ ಸಂಘದ ಬೆಳಗಾವಿ ತಾಲೂಕು ಘಟಕದ ಸದಸ್ಯರು ಜಿಲ್ಲಾಧಿಕಾರಿ ...

Vijaya Karnataka 11 Jun 2019, 5:00 am
ಬೆಳಗಾವಿ : ಹಿಂಗಾರು ಹಂಗಾಮಿನ ಬೆಳೆ ಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಸೋಮವಾರ ಅಖಂಡ ಕರ್ನಾಟಕ ರೈತ ಸಂಘದ ಬೆಳಗಾವಿ ತಾಲೂಕು ಘಟಕದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
Vijaya Karnataka Web BEL-10 LBS 1


ಜಿಲ್ಲೆಯಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಹಿಂಗಾರು ಹಂಗಾಮಿನ ಬೆಳೆಗಳು ನಾಶವಾಗಿವೆ. ಸಾಕಷ್ಟು ಖರ್ಚು ಮಾಡಿ ಬಿತ್ತನೆ ಮಾಡಲಾಗಿತ್ತು. ಆದರೆ, ಮಳೆ ಇಲ್ಲದೆ ಫಸಲು ಬಂದಿಲ್ಲ. ರೈತರು ಸಾಲ ಮಾಡಿ ಬೀಜ, ರಸಗೊಬ್ಬರ ಹಾಕಿದ್ದಾರೆ. ಆದ್ದರಿಂದ ಸರಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಳೆದ ನಾಲ್ಕೈದು ವರ್ಷದಿಂದ ಸತತ ಬರ ಬಿದ್ದಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸರಕಾರ ತಕ್ಷಣ ಎಲ್ಲ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ಸಂಘದ ಮುಖಂಡರಾದ ಬಸಪ್ಪ ಮಲ್ಲನ್ನವರ, ಮಲಕಯ್ಯ ಕುಡಚಿಮಠ, ಮಹಾದೇವ ಅರಗಂಜಿ, ಸುರೇಶ ಕೆಂಗೇರಿ, ಬಸಪ್ಪ ಕರಡಿಗುದ್ದಿ, ಮಾರುತಿ ಕಲಾರಕೊಪ್ಪ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ