ಆ್ಯಪ್ನಗರ

ನೆರೆ ಸಂತ್ರಸ್ತ ರೈತರ ಕೃಷಿ ಸಾಲ ಮನ್ನಾ ಮಾಡಿ

ಗೋಕಾಕ: ಮಳೆ ಹಾಗೂ ನೆರೆಯಿಂದ ಮನೆ, ಆಸ್ತಿ, ಬೆಳೆ ಕಳೆದುಕೊಂಡ ಜನರ ...

Vijaya Karnataka 18 Aug 2019, 5:00 am
ಗೋಕಾಕ : ಮಳೆ ಹಾಗೂ ನೆರೆಯಿಂದ ಮನೆ, ಆಸ್ತಿ, ಬೆಳೆ ಕಳೆದುಕೊಂಡ ಜನರ ಎಲ್ಲ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು ಎಂದು ರಾಜ್ಯಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ ಆಗ್ರಹಿಸಿದ್ದಾರೆ.
Vijaya Karnataka Web BEL-17GOK8


ಅವರು, ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮತ್ತೆ ಕೃಷಿ ಮಾಡಲು ತಕ್ಷಣ ರೈತರಿಗೆ ಹೊಸ ಸಾಲ ಮಂಜೂರು ಮಾಡುವಂತೆ ಸರಕಾರ ಆದೇಶಿಸಬೇಕು. ಪ್ರವಾಹದಿಂದ 2 ಲಕ್ಷ ಕ್ಕಿಂತ ಹೆಚ್ಚು ಎಕರೆ ಕಬ್ಬು ಬೆಳೆ ಹಾನಿಯಾಗಿದೆ. ಎಕರೆಗೆ 1 ಲಕ್ಷ ರೂ. ಪರಿಹಾರ ನೀಡಬೇಕು. ಕಬ್ಬು, ಬಾಳೆ ಇತರೆ ಬೆಳೆಗಳನ್ನು ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ ವ್ಯಾಪ್ತಿಗೆ ಸೇರಿಸಿ ನಷ್ಟ ಪರಿಹಾರ ತುಂಬಿ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಇಂಥ ಸಂಕಟದ ಸಮಯದಲ್ಲಿ ಸಕ್ಕರೆ ಕಾರ್ಖಾನೆಯವರೂ ಸಹ ರೈತರ ನೆರವಿಗೆ ಬರಬೇಕು ಎಂದೂ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ಸುರೇಶ ಪಾಟೀಲ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಾಂತೇಶ ವಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಹಿರೇಮಠ, ಮಲ್ಲಿಕಾರ್ಜುನ ಮಾನಗಾಂವಿ, ಬಸವರಾಜ ಬೀರನಗಡ್ಡಿ, ಶಿವಪುತ್ರಗೌಡಾ ಪಾಟೀಲ ಇನ್ನಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ