ಆ್ಯಪ್ನಗರ

ಪೂರ್ವ ಪ್ರಾಥಮಿಕ ಶಾಲೆ ಯೋಜನೆ ಪುನರ್‌ ಪರಿಶೀಲಿಸಿ

ಗೋಕಾಕ: ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲೆಗಳನ್ನು ಪ್ರಾರಂಭಿಸುವಂತೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು)ದ ಗೋಕಾಕ ತಾಲೂಕು ...

Vijaya Karnataka 19 Jun 2019, 5:00 am
ಗೋಕಾಕ : ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲೆಗಳನ್ನು ಪ್ರಾರಂಭಿಸುವಂತೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು)ದ ಗೋಕಾಕ ತಾಲೂಕು ಸಮಿತಿಯವರು ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
Vijaya Karnataka Web BEL-18 GKK-1


ಐಸಿಡಿಎಸ್‌ ಮಾಗದರ್ಶಿ ಸೂತ್ರಗಳ ಪ್ರಕಾರ ಪೂರ್ವಪ್ರಾಥಮಿಕ ಶಿಕ್ಷ ಣವನ್ನು ಈಗಾಗಲೇ ಅಂಗನವಾಡಿ ಕೇಂದ್ರ ನಡೆಸಲಾಗುತ್ತಿದೆ. 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡುವ ವಿಶೇಷ ತರಬೇತಿಯನ್ನು ಅಂಗನವಾಡಿ ಕಾರ್ಯಕರ್ತೆಯರು ಹೊಂದಿದ್ದಾರೆ. ಹೀಗಾಗಿ, ಸರಕಾರ ಈಗಾಗಲೇ ಜಾರಿಗೊಳಿಸಿರುವ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಯೋಜನೆಯನ್ನು ಪುನರ್‌ ಪರಿಶೀಲನೆ ಮಾಡಬೇಕು. ಇದನ್ನು ಅಂಗನವಾಡಿ ಕೇಂದ್ರಗಳಲ್ಲೇ ಪ್ರಾರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ಸಿಐಟಿಯು ಮುಖಂಡ ಜೆ.ಎಂ. ಜೈನೆಖಾನ, ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡವ್ವ ಪೂಜೇರಿ, ಶೈಲಾ ಜೋಶಿ, ಎಂ.ಎಂ. ಮುಲ್ಲಾ, ಮಡ್ಡೆಪ್ಪ ಭಜಂತ್ರಿ, ಕಲ್ಲಪ್ಪ ಮಾದರ ಸೇರಿದಂತೆ ಸಾವಿರಾರು ಕಾರ್ಯಕರ್ತೆಯರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ