ಆ್ಯಪ್ನಗರ

ಬೆಳಗಾವಿಗೆ ಡಿಕೆಶಿ ದಿಢೀರ್ ಭೇಟಿ; ಲಕ್ಷ್ಮಣ ಸವದಿ ನಿವಾಸದಲ್ಲಿ ಮಾತುಕತೆ

ಲಕ್ಷ್ಮಣ ಸವದಿ ನಿವಾಸಕ್ಕೆ ಡಿಕೆಶಿ ಭೇಟಿ - ಮೇ 30ರಂದು ತಡರಾತ್ರಿ ಡಿ.ಕೆ. ಶಿವಕುಮಾರ್ ಅವರು ದಿಢೀರನೆ ಬೆಳಗಾವಿ ಪ್ರವಾಸ ಕೈಗೊಂಡಿದ್ದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವಾರು ಸ್ಥಳೀಯ ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಮುಂದಿನ ದಿನಗಳಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವುದಾಗಿ ಹೇಳಿದರು.

Edited byಚೇತನ್ ಓ.ಆರ್. | Vijaya Karnataka Web 31 May 2023, 9:46 am

ಹೈಲೈಟ್ಸ್‌:

  • ಮೇ 30ರ ರಾತ್ರಿ ಬೆಳಗಾವಿಗೆ ದಿಡೀರ್ ಭೇಟಿ ನೀಡಿದ ಡಿಸಿಎಂ ಡಿಕೆಶಿವಕುಮಾರ್.
  • ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಕೆ ಶಿವಕುಮಾರ್.
  • ಲಕ್ಷ್ಮಣ ಸವದಿ ನಿವಾಸಕ್ಕೆ ತೆರಳಿದ ಡಿಕೆಶಿ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web DK Shivakumar
ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
ಬೆಳಗಾವಿ: 'ಯಾವಾಗ ? ಏನು ? ಎಂದೆಲ್ಲ ಕೇಳಬೇಡಿ. ಯಾರು ನಮ್ಮ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದಾರೋ ಅವರನ್ನ ಕಾಂಗ್ರೆಸ್ ಪಕ್ಷ ಎಂದೂ ಕೈ ಬಿಡುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
ಮಂಗಳವಾರ ರಾತ್ರಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಚುನಾವಣೆ, ಫಲಿತಾಂಶ ನಂತರ ಸರಕಾರ ರಚನೆ ಬಿಡುವಿಲ್ಲದ ಕಾರ್ಯಕ್ರಮಗಳ ಕಾರಣದಿಂದ ಒಂದಿಷ್ಟು ಜನರನ್ನು ಮಾತನಾಡಿಸಲು ಆಗಿರಲಿಲ್ಲ. ಇದೇ ಕಾರಣದಿಂದ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಮಾತನಾಡಿಸಲು ಸ್ವತಃ ಬೆಳಗಾವಿಗೆ ಆಗಮಿಸಿದ್ದೇನೆ’’ ಎಂದರು.


“ಅವರಿಬ್ಬರೂ ನಮ್ಮ ಪಕ್ಷಕ್ಕೆ ಬಂದು ಇನ್ನಷ್ಟು ಶಕ್ತಿ ತುಂಬಿದ್ದಾರೆ. ಸಚಿವ ಸ್ಥಾನ ಸಿಗದಿರುವ ಬಗ್ಗೆ ಅವರಲ್ಲಿ ಯಾವುದೇ ಅಸಮಾಧಾನ ಇಲ್ಲ. ಹಾಗಂತ ಅವರನ್ನು ಪಕ್ಷ ನಿರ್ಲಕ್ಷಿಸುವುದೂ ಇಲ್ಲ. ಕೈ ಬಿಡುವುದೂ ಇಲ್ಲ. ಮುಂದಿನ‌ ದಿನಗಳಲ್ಲಿ ಅವರಿಬ್ಬರಿಗೂ ಉತ್ತಮ ಅವಕಾಶಗಳು ಸಿಗುತ್ತವೆ’’ ಎಂದರು.

ಸಚಿವ ಸಂಪುಟ ಸ್ಥಾನ ಸಿಗಲಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅಸಮಾಧಾನ ಆಗಿದ್ದಾರೆ. ಅವರ ಜತೆಗೆ ನೇರವಾಗಿ ಮಾತನಾಡಿ ಅಸಮಾಧಾನ ಪಡಿಸುವ ಉದ್ಧೇಶದಿಂದ ಡಿ.ಕೆ.ಶಿವಕುಮಾರ ಬೆಳಗಾವಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

ನಮ್ಮ ಸ್ಪೀಡ್‌ಗೆ ಓಡಿ, ಇಲ್ಲ ಹೊರಡಿ! ಸತೀಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್‌ ವಾರ್ನಿಂಗ್‌!

ಸವದಿ ಮನೆಗೆ ಸತೀಶ್ ಜಾರಕಿಹೊಳಿ ಹೋಗಿದ್ದು ವಿಶೇಷ!

ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್, ಚನ್ನರಾಜ ಹಟ್ಟಿಹೊಳಿ ಸ್ವಾಗತಿಸಿ ಬರ ಮಾಡಿಕೊಂಡರು.

ನಂತರ ಡಿ.ಕೆ.ಶಿವಕುಮಾರ ನೇರವಾಗಿ ಬೆಳಗಾವಿ ನಗರದಲ್ಲಿರುವ ಲಕ್ಷ್ಮಣ ಸವದಿ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದರು. ಬುಧವಾರ ಬೆಳಗ್ಗೆ ಬೆಳಗಾವಿಯಿಂದ ಹುಬ್ವಳ್ಳಿಗೆ ತೆರಳಿ ಅಲ್ಲಿ ಜಗದೀಶ್ ಶೆಟ್ಟರ್ ಜತೆಗೆ ಮಾತುಕತೆ ಮಾಡಲಿದ್ದಾರೆ. ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಇವರೆಗೆ ರಾಜಕೀಯ ಎದುರಾಳಿ ಆಗಿದ್ದ ಲಕ್ಷ್ಮಣ ಸವದಿ ಮನೆಗೆ ಡಿ.ಕೆ.ಶಿವಕುಮಾರ ಜತೆಗೆ ತೆರಳಿರುವುದು ವಿಶೇಷ.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ