ಆ್ಯಪ್ನಗರ

ನೀರು ಪೂರೈಕೆಯಲ್ಲಿ ತಾರತಮ್ಯ: ಶಾಸಕ ಅಭಯ ಆಕ್ರೋಶ

Vijaya Karnataka 23 Jun 2018, 5:00 am
ಬೆಳಗಾವಿ: ''ನೀವು ಕಚೇರಿಯಲ್ಲಿ ಕುಳಿತು ಕೆಲಸ ಮಾಡಿದರೆ ಸಮಸ್ಯೆ ಅರ್ಥವಾಗುವುದಿಲ್ಲ. ಸ್ಥಳಕ್ಕೆ ಭೇಟಿ ನೀಡಿ. ಆಗ ವಾಸ್ತವದ ಅರಿವಾಗುತ್ತದೆ'', ಎಂದು ಶಾಸಕ ಅಭಯ ಪಾಟೀಲ ಜಲಮಂಡಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
Vijaya Karnataka Web BLG-2206-2-52-BEL-22 LBS 19


ನಗರದ ಜಲಮಂಡಳಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ''ದಕ್ಷಿಣ ಮತಕ್ಷೇತ್ರದ ಹಲವು ಪ್ರದೇಶಗಳಿಗೆ ಜಲಮಂಡಳಿ ನೀರು ಪೂರೈಕೆ ಮಾಡುವಲ್ಲಿ ತಾರತಮ್ಯ ಮಾಡುತ್ತಿದೆ. ಉತ್ತರ ಕ್ಷೇತ್ರದಲ್ಲಿ ಶೇ.65 ರಷ್ಟು ಪ್ರದೇಶಕ್ಕೆ ನೀರು ಪೂರೈಕೆಯಾಗುತ್ತಿದೆ. ಆದರೆ ದಕ್ಷಿಣದ ಬಹುತೇಕ ಪ್ರದೇಶಗಳಿಗೆ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ. ಇನ್ನು ಮುಂದೆ ಈ ರೀತಿಯಾದರೆ ಸಹಿಸುವುದಿಲ್ಲ'', ಎಂದು ಎಚ್ಚರಿಸಿದರು.

ದಕ್ಷಿಣ ಮತಕ್ಷೇತ್ರಕ್ಕೆ ನೀರು ಪೂರೈಕೆಗೆ ಸಂಬಂಧಿಸಿದಂತೆ ಜಲಮಂಡಳಿ ಕೂಡಲೇ ಪ್ರಸ್ತಾವ ಸಿದ್ಧಪಡಿಸಬೇಕು. ಕ್ಷೇತ್ರದ ಪ್ರತಿಯೊಂದು ವಾರ್ಡ್‌ಗೆ 24*7 ನೀರು ಪೂರೈಕೆ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ತಾಕೀತು ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ