ಆ್ಯಪ್ನಗರ

ಕೆಎಂಎಫ್‌ ಅಧ್ಯಕ್ಷ ಗಾದಿಗೆ 10ರಂದು ಚುನಾವಣೆ

ಬೆಳಗಾವಿ: ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿ (ಕೆಎಂಎಫ್‌) ಅಧ್ಯಕ್ಷ ಸ್ಥಾನಕ್ಕೆ ಮೇ 10ರಂದು ಚುನಾವಣೆ ನಿಗದಿಯಾಗಿದೆ...

Vijaya Karnataka 3 May 2019, 5:00 am
ಬೆಳಗಾವಿ : ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿ (ಕೆಎಂಎಫ್‌) ಅಧ್ಯಕ್ಷ ಸ್ಥಾನಕ್ಕೆ ಮೇ 10ರಂದು ಚುನಾವಣೆ ನಿಗದಿಯಾಗಿದೆ. ಅಂದು ನಡೆಯುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಆಯ್ಕೆ ಅವಿರೋಧವಾಗಿ ನಡೆಯುತ್ತದೆಯೋ ಅಥವಾ ಚುನಾವಣೆ ನಡೆಯುತ್ತದೋ ಎನ್ನುವ ವಿಷಯವಾಗಿ ಈಗ ಚರ್ಚೆ ಆರಂಭಗೊಂಡಿದೆ.
Vijaya Karnataka Web election on 10th for the post of kmf president
ಕೆಎಂಎಫ್‌ ಅಧ್ಯಕ್ಷ ಗಾದಿಗೆ 10ರಂದು ಚುನಾವಣೆ


ಏ.28 ರಂದು ಏಳು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದರೆ, ಅದಕ್ಕೂ ಮುಂಚೆ ಏಳು ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ನಿರ್ದೇಶಕರ ಚುನಾವಣೆ ನಂತರದ 15 ದಿನಗಳೊಳಗೆ ಅಧ್ಯಕ್ಷ ಸ್ಥಾನದ ಚುನಾವಣೆ ಕೈಗೊಳ್ಳಬೇಕೆಂಬ ನಿಯಮದ ಪ್ರಕಾರ ಮೇ 10ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ. ಚುನಾಯಿತ 14 ನಿರ್ದೇಶಕರು, ಸರಕಾರದ ಓರ್ವ ನಾಮನಿರ್ದೇಶಿತ ನಿರ್ದೇಶಕ ಮತ್ತು ರಾಜ್ಯ ಹಾಲು ಮಹಾಮಂಡಳಿ ನಿರ್ದೇಶಕ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ, ಸಹಕಾರ ಇಲಾಖೆ ಮತ್ತು ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಪ್ರತಿನಿಧಿಗಳು ಸೇರಿದಂತೆ ಒಟ್ಟು 19 ಮತಗಳು ಅಧ್ಯಕ್ಷೀಯ ಚುನಾವಣೆಯಲ್ಲಿ ಚಲಾವಣೆಗೊಳ್ಳಲಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ