ಆ್ಯಪ್ನಗರ

ಬೆಳಗಾವಿಯಲ್ಲಿ ಗ್ರಾಹಕರ ವ್ಯಾಜ್ಯ ಪರಿಹಾರ ಪೀಠ ಸ್ಥಾಪಿಸಿ

ಬೆಳಗಾವಿ : ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದ ಸಂಚಾರಿ ಪೀಠವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಬುಧವಾರ ಜಿಲ್ಲಾ ಗ್ರಾಹಕರ ಸಂಘದ ...

Vijaya Karnataka 15 Nov 2018, 5:00 am
ಬೆಳಗಾವಿ : ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದ ಸಂಚಾರಿ ಪೀಠವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಬುಧವಾರ ಜಿಲ್ಲಾ ಗ್ರಾಹಕರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಗೆ ಮನವಿ ರವಾನಿಸಿದರು.
Vijaya Karnataka Web BEL-14 LBS 2


ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆಯಿಂದ ಪ್ರತಿ ತಿಂಗಳು ನೂರಾರು ಪ್ರಕರಣಗಳು ಇತ್ಯರ್ಥಪಡಿಸಲಾಗುತ್ತಿದೆ. ಇದರ ವಿರುದ್ಧ ಎದುರುದಾರರು ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗಕ್ಕೆ ಮೇಲ್ಮನವಿಯನ್ನು ಸಲ್ಲಿಸುತ್ತಿದ್ದಾರೆ. ನ್ಯಾಯಕ್ಕಾಗಿ ಬೆಳಗಾವಿಯಿಂದ ಬೆಂಗಳೂರಿಗೆ ಹೋಗುವುದರಿಂದ ಸಮಯ ಮತ್ತು ಹೆಚ್ಚಿನ ಹಣ ಖರ್ಚಾಗುತ್ತಿದೆ. ಆದ್ದರಿಂದ ಸರಕಾರ ಬೆಳಗಾವಿಯಲ್ಲಿ ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದ ಸಂಚಾರಿ ಪೀಠ ಸ್ಥಾಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಸಂಘದ ಅಧ್ಯಕ್ಷ ಎನ್‌.ಆರ್‌. ಲಾತೂರ, ಅರ್ಜುನ ಹಲಕರ್ಣಿ, ಶಿವಾನಂದ ಪಾಟೀಲ, ಎ.ಬಿ. ಪಾಟೀಲ, ನಿತೀನ ರಜಪೂತ, ಯದುನಾಥ ಕರವೀರ, ಬಾಬಾಸಾಹೇಬ ಪಾಟೀಲ, ಕೃಷ್ಣಾ ಅಷ್ಟೇಕರ ಹಾಗೂ ಇನ್ನಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ