ಆ್ಯಪ್ನಗರ

ಸರಕಾರದಿಂದ ರೈತ ಮುಖಂಡರ ಕಡೆಗಣನೆ: ಆರೋಪ

ಬೆಳಗಾವಿ : ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಎಚ್‌ಡಿ...

Vijaya Karnataka 23 Nov 2018, 5:00 am
ಬೆಳಗಾವಿ : ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಕರೆದ ರೈತರ ಸಭೆಗೆ ಪ್ರಮುಖ ಮುಖಂಡರನ್ನು ಆಹ್ವಾನಿಸದೆ ಕಡೆಗಣಿಸಿದ್ದಾರೆ ಎಂದು ಬಿಜೆಪಿ ಮುಖಂಡ ಅಶೋಕ ಪೂಜಾರಿ ಆರೋಪಿಸಿದ್ದಾರೆ.
Vijaya Karnataka Web farmers are ignored by the government charges
ಸರಕಾರದಿಂದ ರೈತ ಮುಖಂಡರ ಕಡೆಗಣನೆ: ಆರೋಪ


ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬಿನ ಬಾಕಿ ಬಿಲ್‌ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ ಮಾಡುತ್ತಿರುವ ರೈತ ಮುಖಂಡರನ್ನು ಸರಕಾರ ವಿಶ್ವಾಸಕ್ಕೆ ತೆಗೆದುಕೊಂಡು ಸಭೆ ನಡೆಸುವಲ್ಲಿ ವಿಫಲವಾಗಿದೆ. ರೈತ ಸಂಘಟನೆಯನ್ನು ಒಡೆಯುವ ತಂತ್ರಗಾರಿಕೆ ಕಾಣದ ಕೈಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದರು.

ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಮಾತನಾಡಿ, ಪ್ರಮುಖ ರೈತ ಮುಖಂಡರನ್ನು ಬಿಟ್ಟು ಸರಕಾರ ಸಭೆ ನಡೆಸಿರುವುದು ಸರಿಯಲ್ಲ. ಜಿಲ್ಲಾಡಳಿತವೂ ಇದರಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದರು.

ಆರ್‌.ಎಸ್‌. ದರ್ಗೆ, ಎಂ.ಟಿ. ಪಾಟೀಲ, ಈರಣ್ಣ ಕೊಣ್ಣೂರ, ಮಲ್ಲಪ್ಪ ತೇರದಾಳ, ಚನ್ನಪ್ಪ ಅಥಣಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ