ಆ್ಯಪ್ನಗರ

ಪಿಕೆಪಿಎಸ್‌ ಮುಂದೆ ರೈತರ ಪ್ರತಿಭಟನೆ

ಅಥಣಿ: ತಾಲೂಕಿನ ದೇವರಡ್ಡೇರಹಟ್ಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ...

Vijaya Karnataka 13 Jun 2018, 5:00 am
ಅಥಣಿ: ತಾಲೂಕಿನ ದೇವರಡ್ಡೇರಹಟ್ಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸಾಲಮನ್ನಾ ವಿಷಯದಲ್ಲಿ ರೈತರಿಗೆ ವಂಚಿಸಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಮಸ್ಥರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದೆ ಪ್ರತಿಭಟನೆ ನಡೆಸಿದರು.
Vijaya Karnataka Web BLG-1206-2-52-12 ATHANI-03


446 ರೈತರ 2 ಕೋಟಿ ರೂ.ಗಳ ಸಾಲಮನ್ನಾ ಕುರಿತು ರೈತರಿಗೆ ವಂಚನೆಯಾಗಿದೆ. ಪಿಕೆಪಿಎಸ್‌ ಅಧ್ಯಕ್ಷ , ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಎಂದು ಪ್ರತಿಭಟನಾಕಾರರು ಆರೋಪಿಸಿದರು. ಟೈರ್‌ಗೆ ಬೆಂಕಿ ಹಚ್ಚಿ, ಸೊಸೈಟಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

2017ರ ಜೂನ್‌ 20ರಂದು ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಿ ಆದೇಶ ಹೊರಡಿಸಿತ್ತು. ಆದರೆ, ಸೊಸೈಟಿ ರೈತರಿಗೆ ವಂಚನೆ ಮಾಡಿದೆ ಎಂದು ದೂರಿದ ರೈತರು ಸಹಕಾರಿ ಸಂಘಕ್ಕೆ ಮುತ್ತಿಗೆ ಹಾಕಿ ಸಾಲಮನ್ನಾ ಮಾಡುವಂತೆ ಆಗ್ರಹಿಸಿದರು. ಗ್ರಾಮದಲ್ಲಿ ಪ್ರಕ್ಷ ುಬ್ದ ವಾತಾವರಣ ನಿರ್ಮಾಣವಾಗಿದ್ದರಿಂದ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ