ಆ್ಯಪ್ನಗರ

ಆರ್‌ಸಿಯು ಘಟನೆ: ಕೊನೆಗೂ ದೂರು ದಾಖಲು

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ದಾಂಧಲೆಗೆ ಸಂಬಂಧಿಸಿದಂತೆ ಕೊನೆಗೂ ಪೊಲೀಸ್‌ ದೂರು ದಾಖಲಾಗಿದೆ...

Vijaya Karnataka 5 Oct 2018, 5:00 am
ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ದಾಂಧಲೆಗೆ ಸಂಬಂಧಿಸಿದಂತೆ ಕೊನೆಗೂ ಪೊಲೀಸ್‌ ದೂರು ದಾಖಲಾಗಿದೆ. ವಿಶ್ವವಿದ್ಯಾಲಯದ ಕುಲಪತಿ ಶಿವಾನಂದ ಹೊಸಮನಿ ಮತ್ತು ಕುಲಸಚಿವ ಎಸ್‌.ಬಿ.ಅಲಗೂರ ಕಾಕತಿ ಪೊಲೀಸ್‌ ಠಾಣೆಯಲ್ಲಿ ಗುರುವಾರ ದೂರು ದಾಖಲಿಸಿದ್ದಾರೆ.
Vijaya Karnataka Web finally complaint lodged on rcu incident
ಆರ್‌ಸಿಯು ಘಟನೆ: ಕೊನೆಗೂ ದೂರು ದಾಖಲು


ಅ.1ರಂದು ವಿಶ್ವವಿದ್ಯಾಲಯಕ್ಕೆ ನುಗ್ಗಿ ಗಲಾಟೆ ಮಾಡಿದ ಅಪರಿಚಿತರ ಗುಂಪಿನ ಮೇಲೆ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ. ''ಘಟನೆ ನಡೆದ ದಿನಗಳಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ. ಆದ್ದರಿಂದ, ಗಲಾಟೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು'', ಎಂದು ದೂರಿನಲ್ಲಿ ಹೇಳಲಾಗಿದೆ.

ಅ.1ರಂದು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ರಕ್ತದಾನ ಶಿಬಿರ ಮುಗಿಯುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದು ಸುಣಗಾರ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ವಿಶ್ವವಿದ್ಯಾಲಯಕ್ಕೆ ನುಗ್ಗಿದ್ದರಿಂದ ಗಲಾಟೆ ನಡೆದಿತ್ತು. ಸ್ಥಳದಲ್ಲಿದ್ದ ಕುರ್ಚಿ, ಗ್ಲಾಸುಗಳನ್ನು ಒಡೆದು ಹಾಕಲಾಗಿತ್ತು. ಈ ಸಂದರ್ಭದಲ್ಲಿ ಕೆಲ ವಿದ್ಯಾರ್ಥಿಗಳೂ ಗಾಯಗೊಂಡಿದ್ದರು. ಆದರೂ, ವಿಶ್ವವಿದ್ಯಾಲಯದ ಉನ್ನತಾಧಿಕಾರಿಗಳಾದ ಕುಲಪತಿ ಮತ್ತು ಕುಲಸಚಿವರು 'ಅಪರಿಚಿತರ ಗುಂಪು' ಎಂದು ದೂರಿನಲ್ಲಿ ಹೇಳಿರುವುದು ಅನುಮಾನಗಳಿಗೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ