ಗೋಕಾಕ: ಸತತವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ನದಿ ದಡದಲ್ಲಿರುವ ಗ್ರಾಮಗಳಿಗೆ ಪ್ರವಾಹದ ಭೀತಿ ಉಂಟಾಗಿದ್ದು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೇಂದ್ರ ಸ್ಥಳದಲ್ಲಿಯೇ ಇರಲು ಸೂಚನೆ ನೀಡಲಾಗಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ. ಪ್ರವಾಹದ ಹಿನ್ನೆಲೆಯಲ್ಲಿ ಯಾವುದಾದರೂ ಅನಾಹುತಗಳು ಸಂಭವಿಸುವ ಘಟನೆಗಳು ಕಂಡು ಬಂದರೆ ಕೂಡಲೇ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತಿಳಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರವಾಹದ ಅಪಾಯ: ಗ್ರಾಪಂಗೆ ತಿಳಿಸಲು ಸೂಚನೆ
ಸತತವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಗೋಕಾಕ ಹಾಗೂ ಮೂಡಲಗಿ ...
Vijaya Karnataka 6 Aug 2019, 5:00 am