ಆ್ಯಪ್ನಗರ

ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡಿ

ಬೆಳಗಾವಿ : ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಸೋಮವಾರ ಸುವರ್ಣ ...

Vijaya Karnataka 18 Dec 2018, 5:00 am
ಬೆಳಗಾವಿ : ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಸೋಮವಾರ ಸುವರ್ಣ ಗಾರ್ಡನ್‌ನಲ್ಲಿ ಪ್ರತಿಭಟನೆ ನಡೆಸಿದರು. ಗೋವಿನ ಜೋಳ, ಕಡಲೆ, ತೊಗರಿ ಮತ್ತಿತರ ಬೆಳೆಗಳಿಗೆ ಸೂಕ್ತ ಬೆಲೆಯೊಂದಿಗೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತರು ಒತ್ತಾಯಿಸಿದರು.
Vijaya Karnataka Web BEL-17 LBS 9


ಈ ವೇಳೆ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಬಾಬಾಗೌಡ ಪಾಟೀಲ ಮಾತನಾಡಿ, ರೈತರ ಜಲ್ವಂತ ಸಮಸ್ಯೆ ಪರಿಹರಿಸುವಂತೆ ಹಲವು ಬಾರಿ ಸರಕಾರಗಳಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ರೈತರ ಬಗ್ಗೆ ಸರಕಾರಕ್ಕೆ ಕಾಳಜಿ ಇಲ್ಲ. ಬೆಳಗಾವಿ ಅಧಿವೇಶನ ಜಾತ್ರೆಯಂತೆ ಆಗಿದೆ. ಸರಕಾರ ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈತ್ರಿ ಸರಕಾರ ರೈತರ ಸಾಲಮನ್ನಾ ಮಾಡಿದ್ದೇವೆ ಎಂದು ಹೇಳುತ್ತಿದೆ. ಆದರೆ, ರೈತರ ಸಾಲಮನ್ನಾ ಯೋಜನೆ ಇನ್ನೂ ಕಾರ್ಯ ರೂಪಕ್ಕೆ ಬಂದಿಲ್ಲ. ಫಸಲ್‌ ಬಿಮಾ ಯೋಜನೆಯ ವಿಮೆಯೂ ಸರಿಯಾಗಿ ರೈತರಿಗೆ ತಲುಪಿಲ್ಲ ಎಂದು ಅವರು ಆರೋಪಿಸಿದರು.

ರೈತ ಸಂಘದ ಮುಖಂಡರಾದ ನಿಂಗಪ್ಪ ನಂದಿ, ಸಿದ್ದರಾಮಪ್ಪ ರಂಜನಗಿ, ಎಂ.ಕೆ. ಕುಲಕರ್ಣಿ, ಅರವಿಂದ ಕುಲಕರ್ಣಿ, ಮಲ್ಲಿಕಾರ್ಜುನ ವಾಲಿ, ಸುಧೀರಕುಮಾರ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ