ಆ್ಯಪ್ನಗರ

15 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ವಶ

ಅಕ್ರಮವಾಗಿ ಗೋವಾ ಮದ್ಯ ಸಾಗಣೆ ಮಾಡುತ್ತಿದ್ದ ವಾಹನ ಹಾಗೂ ಲಕ್ಷಾಂತರ ರೂ.ಮೌಲ್ಯದ ಮದ್ಯವನ್ನು ಅಬಕಾರಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

Vijaya Karnataka 6 Oct 2018, 5:00 am
ಬೆಳಗಾವಿ: ಅಕ್ರಮವಾಗಿ ಗೋವಾ ಮದ್ಯ ಸಾಗಣೆ ಮಾಡುತ್ತಿದ್ದ ವಾಹನ ಹಾಗೂ ಲಕ್ಷಾಂತರ ರೂ.ಮೌಲ್ಯದ ಮದ್ಯವನ್ನು ಅಬಕಾರಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
Vijaya Karnataka Web BLG-0510-2-52-5MAHESH4


ಶುಕ್ರವಾರ ಸಂಜೆ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್‌ ಪೋಸ್ಟ್‌ ಬಳಿ ವಾಹನ ತಪಾಸಣೆ ಮಾಡುವಾಗ ಗೋವಾ ಮದ್ಯ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ವಾಹನ ಸೇರಿದಂತೆ 30 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 207 ಬಾಕ್ಸ್‌ಗಳಲ್ಲಿದ್ದ 15 ಲಕ್ಷ ರೂ.ಮೌಲ್ಯದ ಗೋವಾ ಮದ್ಯ ಜಪ್ತಿ ಮಾಡಲಾಗಿದೆ. ಮದ್ಯವನ್ನು ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಣೆ ಮಾಡಲಾಗುತ್ತಿತ್ತು.

ಮಹಾರಾಷ್ಟ್ರದ ಸೊಲ್ಲಾಪುರ ಪಟ್ಟಣದ ಚಾಲಕ ಮತ್ತು ನಿರ್ವಾಹಕನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಅಬಕಾರಿ ನಿಯಂತ್ರಣಾಧಿಕಾರಿ ಕೃಷ್ಣ ಅರುಣಕುಮಾರ ತಿಳಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ