ಆ್ಯಪ್ನಗರ

ಗೋಕಾಕ ಯುವಕನ ಸಾವು ಕೊಲೆಯಲ್ಲ, ಆತ್ಮಹತ್ಯೆ

ಬೆಳಗಾವಿ: ಇಲ್ಲಿನ ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಶಿವಕುಮಾರ ಬಲರಾಮ… ...

Vijaya Karnataka 28 May 2019, 5:00 am
ಬೆಳಗಾವಿ : ಇಲ್ಲಿನ ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಶಿವಕುಮಾರ ಬಲರಾಮ ಉಪ್ಪಾರ (19) ಸಾವಿನ ಪ್ರಕರಣಕ್ಕೆ ಸಂಬಂಧಿಧಿಸಿದಂತೆ ಅದು ಕೊಲೆಯಲ್ಲ ಆತ್ಮಹತ್ಯೆ ಎನ್ನುವುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ.
Vijaya Karnataka Web gokaka young mans death is not murder but suicide
ಗೋಕಾಕ ಯುವಕನ ಸಾವು ಕೊಲೆಯಲ್ಲ, ಆತ್ಮಹತ್ಯೆ


ಈ ಮಾಹಿತಿಯನ್ನು ಎಸ್‌ಪಿ ಸುಧೀರ್‌ಕಮಾರ್‌ ರೆಡ್ಡಿ ಖಚಿಪಡಿಸಿದ್ದಾರೆ. ಅಲ್ಲದೆ, ಮರಣೋತ್ತರ ಪರೀಕ್ಷೆಯ ವರದಿಯನ್ನು ಅವರು ಪ್ರಕಟಿಸಿದ್ದು, ಅದರಲ್ಲಿ ನೇಣು ಬಿಗಿದಿದ್ದರಿಂದ ಯುವಕ ಮೃತಪಟ್ಟಿದ್ದಾಗಿ ಉಲ್ಲೇಖಿಸಲಾಗಿದೆ. ಆದರೆ, ಯುವಕ ಗೋರಕ್ಷಕನಾಗಿದ್ದ. ಅದಕ್ಕಾಗಿ ಅವನನ್ನು ಕೊಲೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಸುದ್ದಿ ಹಬ್ಬಿಸಿದ ಇಬ್ಬರನ್ನು ಬೆಳಗಾವಿ ಪೊಲೀಸರು ಭಾನುವಾರ ಬಂಧಿಧಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ