ಆ್ಯಪ್ನಗರ

ಸಂತ್ರಸ್ತರ ಯೋಗಕ್ಷೇಮ ವಿಚಾರಣೆ

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಲೂಕಿನ ಅಂಕಲಿ ...

Vijaya Karnataka 11 Aug 2019, 5:00 am
ಚಿಕ್ಕೋಡಿ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಾಲೂಕಿನ ಅಂಕಲಿ ಗ್ರಾಮದ ಬಳಿ ಕೃಷ್ಣಾ ತೀರದಲ್ಲಿ ಶನಿವಾರ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು. ನಂತರ ಅಲ್ಲಿನ ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.
Vijaya Karnataka Web BEL-10CKD5


ಸುದ್ದಿಗಾರರೊಂದಿಗೆ ಮಾತನಾಡಿ, ''ಪ್ರವಾಹ ನಿರ್ವಹಣೆಗಾಗಿ ಸರಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಿದ್ದರೆ ಇಂತಹ ಅನಾಹುತಗಳು ಸಂಭವಿಸುತ್ತಿರಲಿಲ್ಲ. ಮೊದಲೇ ಸಿದ್ಧತೆ ಮಾಡಿಕೊಳ್ಳದ ರಾಜ್ಯ ಸರಕಾರ ನೆರೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ'', ಎಂದು ಕಿಡಿಕಾರಿದರು.

''ರಕ್ಷಣಾ ತಂಡಗಳು, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಮತ್ತು ಶಾಸಕ ಗಣೇಶ ಹುಕ್ಕೇರಿ ಸೇರಿದಂತೆ ಹಲವು ಜನಪ್ರತಿನಿಧಿಗಳು ನದಿ ತೀರದಲ್ಲಿಯೇ ನಿಂತು ನೆರೆ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುತ್ತಿರುವುದು ಶ್ಲಾಘನೀಯ'', ಎಂದು ಹೇಳಿದರು. ನಿರಾಶ್ರಿತರು ಕಾಳಜಿ ಕೇಂದ್ರದಲ್ಲಿನ ಅವ್ಯವಸ್ಥೆಗಳ ಕುರಿತು ಮಾಜಿ ಸಿಎಂ ಎದುರು ಅಳಲು ತೋಡಿಕೊಂಡರು. ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ಸಾ.ರಾ. ಮಹೇಶ್‌, ಮಾಜಿ ಸಂಸದ ಪ್ರಕಾಶ್‌ ಹುಕ್ಕೇರಿ, ಮಾಜಿ ಶಾಸಕ ಕೆ.ಪಿ.ಮಗೆನ್ನವರ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ