ಆ್ಯಪ್ನಗರ

ಬೆಳಗಾವಿ ನಗರದಲ್ಲಿ ಆಲಿಕಲ್ಲು ಮಳೆ

ಬೆಳಗಾವಿ ನಗರದಲ್ಲಿ ಬುಧವಾರ ಮಧ್ಯಾಹ್ನ ಆಲಿಕಲ್ಲು ಮಳೆ ಸುರಿಯಿತು. ಎರಡು ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ ಇನ್ನಷ್ಟು ತಂಪೆರೆಯಿತು. ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ಹಲವೆಡೆ ಮರ ಮತ್ತು ವಿದ್ಯುತ್‌ ಕಂಬಗಳು ಹಾನಿಗೊಂಡಿವೆ.

Vijaya Karnataka 28 Mar 2019, 5:00 am
ಬೆಳಗಾವಿ: ನಗರದಲ್ಲಿ ಬುಧವಾರ ಮಧ್ಯಾಹ್ನ ಆಲಿಕಲ್ಲು ಮಳೆ ಸುರಿಯಿತು. ಎರಡು ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ ಇನ್ನಷ್ಟು ತಂಪೆರೆಯಿತು. ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ಹಲವೆಡೆ ಮರ ಮತ್ತು ವಿದ್ಯುತ್‌ ಕಂಬಗಳು ಹಾನಿಗೊಂಡಿವೆ.
Vijaya Karnataka Web BLG-2703-2-52-27 RAIN


ಬೆಳಗಾವಿ ನಗರದ ಕಾಳಿ ಅಂಬ್ರಾಯಿ ಪ್ರದೇಶದಲ್ಲಿ ಮರ ಉರುಳಿ ಬಿದ್ದುಕಾಂಪೌಂಡ್‌ ಗೋಡೆ ಮತ್ತು ವಿದ್ಯುತ್‌ ಕಂಬಗಳು ಹಾನಿಗೊಳಗಾಗಿವೆ. ಶಿವಬಸವ ನಗರದಲ್ಲೂ ಮರ ಬುಡ ಸಮೇತ ಉರುಳಿಬಿದ್ದಿದ್ದರಿಂದ ಕೆಲ ಕಾಲ ಸಂಚಾರ ಸಮಸ್ಯೆ ಉಂಟಾಯಿತು. ಸಂಗೊಳ್ಳಿ ರಾಯಣ್ಣ ವೃತ್ತ ಬಳಿಯ ಆರ್‌ಟಿಒ ಕಚೇರಿಯಲ್ಲೂ ಮರಗಳು ಉರುಳಿವೆ. ಚನ್ನಮ್ಮ ವೃತ್ತ ಸೇರಿದಂತೆ ನಗರದ ತಗ್ಗು ಪ್ರದೇಶಗಳಲ್ಲಿ ಭಾರಿ ಪ್ರಮಣದಲ್ಲಿ ಮಳೆ ನೀರು ನಿಂತಿದ್ದರಿಂದ ಸಾರ್ವಜನಿಕರು ಸಮಸ್ಯೆ ಎದುರಿಸಿದರು. ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲೂ ವ್ಯತ್ಯಯವಾಗಿದೆ.

ಚನ್ನಮ್ಮನ ಕಿತ್ತೂರಿನಲ್ಲಿ ಗುಡುಗು ಸಿಡಿಲಿನೊಂದಿಗೆ ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆ ಸುರಿದಿದೆ. ಈ ವೇಳೆ ಗುರುವಾರ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದರಿಂದ ಮಳೆಯಲ್ಲೂ ಗಿಡದಲ್ಲಿ ಬೆಂಕಿ ಹೊತ್ತು ಉರಿದಿದೆ. ಪಟ್ಟಣದ ವಿದ್ಯಾಗಿರಿ ಸೇರಿದಂತೆ ಹಲವು ಕಡೆಗಳಲ್ಲೂ ತೆಂಗಿನ ಗಿಡಗಳಿಗೆ ಸಿಡಿಲು ಬಡಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ