ಆ್ಯಪ್ನಗರ

ಮಹಾ ಮಳೆ: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದಾಗಿ ಅಲ್ಲಿನ ಜಲಾಶಯಗಳು ಬಹುತೇಕ ಭರ್ತಿಯಾಗಿವೆ. ಜಲಾಶಯಗಳಿಂದ ಹೊರ ಹೋಗುತ್ತಿರುವ ನೀರಿನಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ನಿರೀಕ್ಷೆ ಇದೆ.

Vijaya Karnataka Web 7 Sep 2019, 7:48 pm
ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಉತ್ತರ ಕರ್ನಾಟಕದ ಭಾಗದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ.
Vijaya Karnataka Web River


ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಿದ್ದರಿಂದ ಅಲ್ಲಿನ ಜಲಾಶಯಗಳು ತುಂಬಿ ತುಳುಕುತ್ತಿವೆ. ಅಪಾಯದ ಮಟ್ಟ ತಲುಪಿದ ಹಿನ್ನೆಲೆಯಲ್ಲಿ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.

ಮಹಾರಾಷ್ಟ್ರದ ಕೃಷ್ಣ, ದೂದ್‌ ಗಂಗಾ, ವೇದಗಂಗಾ ನದಿಗಳು ಅಪಾಯದ ಮಟ್ಟ ತಲುಪಿವೆ. ಹೆಚ್ಚುವರಿ ನೀರು ಹರಿದು ಬರುತ್ತಿರುವುದರಿಂದ ಘಟಪ್ರಭಾ, ಮಲಪ್ರಭಾ, ನವಿಲುತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ.

ಕೊಯ್ನಾ ಜಲಾಶಯದಿಂದ ಕೃಷ್ಣ ನದಿಗೆ 1.70 ಲಕ್ಷ ಕ್ಯುಸೆಕ್‌ ನೀರು ಹೊರಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಜಲಾವೃತಗೊಂಡಿದ್ದವು. ಅಥಣಿ, ಚಿಕ್ಕೋಡಿ, ಗೋಕಾಕ್‌ ತಾಲೂಕುಗಳಲ್ಲಿ ಅತಿ ಹೆಚ್ಚು ಹಾನಿಯಾಗಿದೆ.

ಈ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಇದ್ದುದರಿಂದ ಸಂತ್ರಸ್ತರನ್ನು ಸ್ಥಳಾಂತರಿಸಲಾಗಿದ್ದು, ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ