ಆ್ಯಪ್ನಗರ

ಹುಬ್ಬಳ್ಳಿ ಹಳೆ ಬಸ್‌ಗಳು ಬೆಳಗಾವಿಗೆ!

ಬೆಳಗಾವಿ: ರಾಜ್ಯ ಸರಕಾರಿ ಸಂಸ್ಥೆಯ ಹುಬ್ಬಳ್ಳಿ ನೋಂದಣಿಯ ಹಳೆ ಬಸ್‌ಗಳು ಬೆಳಗಾವಿಯಲ್ಲಿ ಸಂಚರಿಸುತ್ತಿದ್ದು, ಇದಕ್ಕೆ ಬೆಳಗಾವಿ ನಾಗರೀಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ...

Vijaya Karnataka 22 Feb 2019, 5:00 am
ಬೆಳಗಾವಿ: ರಾಜ್ಯ ಸರಕಾರಿ ಸಂಸ್ಥೆಯ ಹುಬ್ಬಳ್ಳಿ ನೋಂದಣಿಯ ಹಳೆ ಬಸ್‌ಗಳು ಬೆಳಗಾವಿಯಲ್ಲಿ ಸಂಚರಿಸುತ್ತಿದ್ದು, ಇದಕ್ಕೆ ಬೆಳಗಾವಿ ನಾಗರೀಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Vijaya Karnataka Web BLG-2102-2-52-21PRAMOD2


ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಗುಜರಿ ಬಸ್‌ಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಸಂಚಾರ ವ್ಯವಸ್ಥೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ನೆಟ್ಟಿಗರು ಈ ಕುರಿತು ಇಚ್ಚಾಶಕ್ತಿ ಮೆರೆಯದ ಜನಪ್ರತಿನಿಧಿಗಳಿಂದ ನಗರಕ್ಕೆ ಇಂಥ ಅವಸ್ಥೆ ಬಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬೆಳಗಾವಿ ಘಟಕದಲ್ಲಿ ಈಗಾಗಲೇ 90ಕ್ಕೂ ಹೆಚ್ಚು ಹಳೆಯ ಬಸ್‌ಗಳನ್ನು ಗುಜರಿಗೆ ಹಾಕಲಾಗಿದೆ. ಅದರ ಜತೆಯಲ್ಲಿಯೇ ಮತ್ತೆ ಹುಬ್ಬಳ್ಳಿಯಿಂದ ಹಳೆ ಬಸ್‌ಗಳನ್ನು ಬೆಳಗಾವಿಗೆ ತರಲಾಗುತ್ತಿದೆ ಎನ್ನುವ ಆತಂಕ ವ್ಯಕ್ತವಾಗಿದೆ. ಹುಬ್ಬಳ್ಳಿ ನೋಂದಣಿಯ ಹಲವಾರು ಬಸ್‌ಗಳು ನಗರದಲ್ಲಿ ಸಂಚರಿಸುತ್ತಿರುವ ಬಗ್ಗೆ ಫೋಟೊ ಸಮೇತ ಟ್ವಿಟರ್‌ನಲ್ಲಿ ಚರ್ಚೆ ನಡೆಯುತ್ತಿದೆ. ಈ ಕುರಿತು ಸ್ಥಳೀಯ ಜನಪ್ರತಿನಿಧಿಗಳ ಟ್ವಿಟರ್‌ ಖಾತೆಗೆ ಟ್ಯಾಗ್‌ ಕೂಡ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ