ಆ್ಯಪ್ನಗರ

Panchamasali reservation - ಪಂಚಮಸಾಲಿಗೆ ಮೀಸಲಾತಿ ನೀಡದಿದ್ದರೆ ಹೋರಾಟ ಖಚಿತ: ಜಯ ಮೃತ್ಯುಂಜಯ ಶ್ರೀ

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಯ ಮೃತ್ಯುಂಜಯ ಸ್ವಾಮೀಜಿ,​​​​ ''ಮುಖ್ಯಮಂತ್ರಿ ನೀಡಿದ ಭರವಸೆ ಹಿನ್ನೆಲೆಯಲ್ಲಿ ಡಿ.12ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಕೈಬಿಡಲಾಗಿದೆ. ಆದರೆ ಡಿ.19ರಿಂದ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗುತ್ತಿದೆ. ಅಷ್ಟರೊಳಗೆ ರಾಜ್ಯ ಸರಕಾರ ಶಾಶ್ವತ ಹಿಂದುಳಿದ ವರ್ಗದ ಆಯೋಗದಿಂದ ವರದಿಯನ್ನಾದರೂ ತರಿಸಿಕೊಳ್ಳಬೇಕು. ಡಿ. 12ರ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಿದ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ಡಿ.19ರ ಅಂತಿಮ ಗಡುವು ನೀಡಿದ್ದೇವೆ. ಅಷ್ಟರೊಳಗಾಗಿ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳದಿದ್ದರೆ ಹೋರಾಟ ಮಾಡಬೇಕಾಗುತ್ತದೆ''ಎಂದು ತಿಳಿಸಿದ್ದಾರೆ.

Edited byಚೇತನ್ ಓ.ಆರ್. | Vijaya Karnataka Web 28 Nov 2022, 9:39 am
ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂಬ ದಶಕಗಳ ಬೇಡಿಕೆಯನ್ನು ಈಡೇರಿಸಲು ಸರ್ಕಾರ ವಿಫಲವಾದರೆ ಖಚಿತವಾಗಿ ಹೋರಾಟವನ್ನು ಮಾಡಲಾಗುತ್ತದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ,ಸರ್ಕಾರವನ್ನು ಎಚ್ಚರಿಸಿದ್ದಾರೆ.
Vijaya Karnataka Web BasavaJaya Mruthyunjaya Swamiji
ಬಸವಜಯ ಮೃತ್ಯುಂಜಯ ಸ್ವಾಮೀಜಿ (ಸಂಗ್ರಹ ಚಿತ್ರ)


ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮುಖ್ಯಮಂತ್ರಿ ನೀಡಿದ ಭರವಸೆ ಹಿನ್ನೆಲೆಯಲ್ಲಿ ಡಿ.12ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಕೈಬಿಡಲಾಗಿದೆ. ಆದರೆ ಡಿ.19ರಿಂದ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗುತ್ತಿದೆ. ಅಷ್ಟರೊಳಗೆ ರಾಜ್ಯ ಸರಕಾರ ಶಾಶ್ವತ ಹಿಂದುಳಿದ ವರ್ಗದ ಆಯೋಗದಿಂದ ವರದಿಯನ್ನಾದರೂ ತರಿಸಿಕೊಳ್ಳಬೇಕು. ಡಿ. 12ರ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಿದ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ಡಿ.19ರ ಅಂತಿಮ ಗಡುವು ನೀಡಿದ್ದೇವೆ. ಅಷ್ಟರೊಳಗಾಗಿ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳದಿದ್ದರೆ ಹೋರಾಟ ಮಾಡಬೇಕಾಗುತ್ತದೆ''ಎಂದು ಅವರು ತಿಳಿಸಿದ್ದಾರೆ.''ಒಂದು ವೇಳೆ ಡಿ. 19ರೊಳಗೆ ಸಿಎಂ ಆಯೋ ಗದ ವರದಿ ಪಡೆದುಕೊಳ್ಳದೇ ಹೋದರೆ ಅನಿವಾರ್ಯವಾಗಿ ಡಿ. 22ರಂದು ಸುವರ್ಣ ವಿಧಾನ ಸೌಧ ಮುಂದೆ 25 ಲಕ್ಷ ಪಂಚಮಸಾಲಿಗರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

SC ST Reservation: ಎಸ್‌ಟಿ ಎಸ್‌ ಸಿ ಮೀಸಲಾತಿ ಹೆಚ್ಚಳ ಬೆನ್ನಲ್ಲೇ ಇತರ ಸಮುದಾಯದಿಂದಲೂ ಬೇಡಿಕೆ: ರಾಜ್ಯ ಸರ್ಕಾರಕ್ಕೆ ತಲೆನೋವು
ಇದಕ್ಕೂ ಮುನ್ನ ಬಾಗಲಕೋಟೆಯಲ್ಲೂ ಮಾತನಾಡಿದ ಅವರು, 'ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಸಿಎಂ ಶೀಘ್ರ ಸಿಹಿ ಸುದ್ದಿ ಕೊಡಲಿ' ಎಂದು ಹೇಳಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ''ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಯಲ್ಲೇ ಮೀಸಲಾತಿ ಕೊಡಬೇಕಿತ್ತು. ಸೌಲಭ್ಯ ಒದಗಿಸಿದರೆ ಅವರಿಗೆ ಖ್ಯಾತಿ ಬರುತ್ತದೆ ಎಂದು ಕೆಲವರು ಅವರ ಹಾದಿ ತಪ್ಪಿಸಿದ್ದರು. ಈಗ ಯಡಿಯೂರಪ್ಪ ಅವರು ಕೂಡ ಸೌಲಭ್ಯಕ್ಕೆ ಬೆಂಬಲ ಸೂಚಿಸಿದ್ದಾರೆ. ಕೇಂದ್ರ ಸರಕಾರ ಹಾಗೂ ಆರೆಸ್ಸೆಸ್‌ ಒಪ್ಪಿಕೊಂಡಿವೆ. ಸಿಎಂ ಬೊಮ್ಮಾಯಿ ಶೀಘ್ರ ಆಯೋಗದ ವರದಿ ಪಡೆದು ಚುನಾವಣೆ ನೀತಿ ಸಂಹಿತೆ ಪ್ರಕಟಗೊಳ್ಳುವ ಮೊದಲು ಘೋಷಣೆ ಮಾಡಲಿ'' ಎಂದು ಮನವಿ ಮಾಡಿದರು.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ