ಆ್ಯಪ್ನಗರ

ಕಿಸಾನ್ ರೈಲಿಗೆ ರಾಜ್ಯ ಪ್ರಸ್ತಾವ ಸಲ್ಲಿಸಿದರೆ ಪರಿಶೀಲನೆ: ಸಚಿವ ಸುರೇಶ್ ಅಂಗಡಿ

ಕಿಸಾನ್ ರೈಲು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿದರೆ ಇಲ್ಲಿಂದಲೂ ಕಿಸಾನ್ ರೈಲು ಆರಂಭಿಸುವ ಬಗ್ಗೆ ಪರಿಶೀಲಿಸಲಾಗುವುದು.

Vijaya Karnataka Web 7 Aug 2020, 2:27 pm
ಬೆಳಗಾವಿ: ಶುಕ್ರವಾರ ನಡೆದ ದೇಶದ ಮೊಟ್ಟ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಶುಕ್ರವಾರ ಹಸಿರು ನಿಶಾನೆ ತೋರಿಸಿದರು. ವರ್ಚುವಲ್ ವೇದಿಕೆಯ ಮೂಲಕ ನಡೆದ ಈ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ನಂತರ ಮಾತನಾಡಿ, ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿದರೆ ಇಲ್ಲಿಂದಲೂ ಕಿಸಾನ್ ರೈಲು ಆರಂಭಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
Vijaya Karnataka Web suresh angadi
ಸಚಿವ ಸುರೇಶ್ ಅಂಗಡಿ


ಮಾನ್ಯ ಪ್ರಧಾನಮಂತ್ರಿಗಳು ನೀಡಿದ ಭರವಸೆಯಂತೆ ದೇವಲಾಲಿ-ದಾನಾಪುರ ನಡುವೆ ಕಿಸಾನ್ ರೈಲು ಆರಂಭಿಸಲಾಗಿದೆ. ಪ್ರತಿ ಭಾನುವಾರ ಈ ರೈಲು ಸಂಚರಿಸಲಿದೆ. ರೈತರ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯಲಿದೆ. ರೈತರಿಗೆ ಇದೊಂದು ವರದಾನವಾಗಿದೆ. ಮಹಾರಾಷ್ಟ್ರದ ದೇವಲಾಲಪುರದಿಂದ ಬಿಹಾರದ ದಾನಾಪುರಗೆ ಮೊದಲ ಕಿಸಾನ್ ರೈಲು ಸಂಚರಿಸಲಿದೆ ಎಂದು ತಿಳಿಸಿದರು.

ನಾಸಿಕ್ ಜಿಲ್ಲೆಯು ಅತೀ ಹೆಚ್ಚು ತರಕಾರಿ, ಹಣ್ಣು ಸೇರಿದಂತೆ ಕೃಷಿ ಉತ್ಪಾದನೆಗೆ ಹೆಸರುವಾಸಿಯಾಗಿದೆ. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ರೈಲು ಸೌಲಭ್ಯ ಕಲ್ಪಿಸಿರುವುದರಿಂದ ಉತ್ತಮ ದರ ಲಭಿಸಲಿದ್ದು, ಇದರಿಂದ ರೈತರ ಆತ್ಮಹತ್ಯೆಗೆ ಕಡಿವಾಣ ಬೀಳಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ನಾಸಿಕ ಜಿಲ್ಲಾ ಉಸ್ತುವಾರಿ ಸಚಿವರಾದ ಛಗಬ್ ಭುಜಬಲ್ ಅಭಿಪ್ರಾಯಪಟ್ಟರು. ಕೃಷಿಕರಿಗೆ ಅವರ ಉತ್ಪನ್ನಗಳಿಗೆ ಉತ್ತಮ ದರ ಒದಗಿಸುವ ನಿಟ್ಟಿನಲ್ಲಿ ಕಿಸಾನ್ ರೈಲು ಸಹಕಾರಿಯಾಗಲಿದೆ ಎಂದರು.

ಮೊಟ್ಟ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಕೃಷಿ ಸಚಿವ ತೋಮರ್

ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕರಾದ ದೇವೇಂದ್ರ ಫಡಣವೀಸ್ ಮಾತನಾಡಿ, ದೇಶದ ಕೃಷಿಕರ ಹಿತರಕ್ಷಣೆಗೆ ಬದ್ಧವಾಗಿರುವ ಪ್ರಧಾನಮಂತ್ರಿಗಳು ಕಿಸಾನ್ ರೈಲು ಒದಗಿಸುವ ಮೂಲಕ ಭರವಸೆ ಈಡೇರಿಸಿದ್ದಾರೆ.
ಶಿಥಲೀಕರಣ ಘಟಕ ಹಾಗೂ ಸೂಕ್ತ ಸಾಗಾಣಿಕೆ ವ್ಯವಸ್ಥೆ ಇಲ್ಲದಿರುವುದರಿಂದ ರೈತರ ಬೆಳೆಗಳಿಗೆ ಸೂಕ್ತ ಬೆಲೆ ದೊರಕುತ್ತಿರಲಿಲ್ಲ. ಕಿಸಾನ್ ರೈಲು ಸೌಲಭ್ಯದಿಂದ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರೆತು ರೈತರಿಗೆ ಅನುಕೂಲವಾಗಲಿದೆ ಎಂದರು.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬಜೆಟ್‌ನಲ್ಲಿ ಘೋಷಣೆಯಾದ 16 ಅಂಶಗಳ ಯೋಜನೆಗಳಿವು

ರೈಲ್ವೆ ಇಲಾಖೆಯ ಪಿಯುಷ್ ಗೋಯಲ್ ಅಧ್ಯಕ್ಷತೆ ವಹಿಸಿದ್ದರು. ಕೃಷಿ ರಾಜ್ಯ ಮಂತ್ರಿ ಕೈಲಾಶ್ ಚೌಧರಿ, ದೇವೇಂದ್ರ ಫಡಣವೀಸ್, ಛಗನ್ ಭುಜಬಲ್, ಸಂಸದರಾದ ಭಾರತಿ ಪವಾರ್, ಹೇಮಂತ್ ಗೋಡ್ಸೆ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ವ್ಯವಸ್ಥಾಪಕ ಕೇಂದ್ರ ರೈಲ್ವೆ ಸಂಜೀವ್ ಮಿತ್ತಲ್ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ