ಆ್ಯಪ್ನಗರ

ರಮೇಶ ಜಾರಕಿಹೊಳಿಗೆ ಮಹತ್ವದ ಖಾತೆ

ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದ ...

Vijaya Karnataka 7 Dec 2019, 5:00 am
ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿಕಾರ್ಯಕರ್ತರ ಪರಿಶ್ರಮ ಹಾಗೂ ಮತದಾರರ ಆಶೀರ್ವಾದದಿಂದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಜಯ ಗಳಿಸಲಿದ್ದು, ಇವರಿಗೆ ಮುಂದಿನ ಸಂಪುಟ ವಿಸ್ತರಣೆಯಲ್ಲಿಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಚಿವರನ್ನಾಗಿ ಮಾಡಿ ಮಹತ್ವದ ಖಾತೆ ನೀಡಲಿದ್ದಾರೆ ಎಂದು ಕೆಎಂಎಫ್‌ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web 06 GKK-2_53
ಗೋಕಾಕದಲ್ಲಿಏರ್ಪಡಿಸಿದ್ದ ಅರಭಾವಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು.


ಶುಕ್ರವಾರ ತಮ್ಮ ಗೃಹ ಕಚೇರಿ ಎನ್‌ಎಸ್‌ಎಫ್‌ ಅತಿಥಿ ಗೃಹದಲ್ಲಿಏರ್ಪಡಿಸಿದ್ದ ಅರಬಾವಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿಅವರು ಮಾತನಾಡಿದರು. ಈ ಉಪಚುನಾವಣೆಯಲ್ಲಿತಾವೇ ಸ್ಪರ್ಧಿಸಿದ್ದೇವೆ ಎಂದು ಭಾವಿಸಿ ಸುಮಾರು ಸಾವಿರಕ್ಕೂ ಅಧಿಕ ಕಾರ್ಯಕರ್ತರು 10 ದಿನಗಳ ಕಾಲ ಗೋಕಾಕ ಮತಕ್ಷೇತ್ರದ ಎಲ್ಲಹಳ್ಳಿಗಳಲ್ಲಿಸಂಚರಿಸಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಕಾರ್ಯಕರ್ತರ ಬಲದಿಂದ ರಮೇಶ ಜಾರಕಿಹೊಳಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದರು.

ರಾಜ್ಯದಲ್ಲಿಬಿಜೆಪಿ 11 ಸ್ಥಾನಗಳನ್ನು ಗೆಲ್ಲಲಿದ್ದು, ಮೂರುವರೆ ವರ್ಷಗಳವರೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆಡಳಿತ ನಡೆಸಿ ರಾಜ್ಯದ ಸಮಗ್ರ ವಿಕಾಸಕ್ಕೆ ಶ್ರಮಿಸಲಿದ್ದಾರೆ. ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ನದಿ ತೀರದ ಗ್ರಾಮಗಳ ಸಂತ್ರಸ್ತರ ಬದುಕು ದುಸ್ತರವಾಗಿದ್ದು, ಉಪಚುನಾವಣೆ ಫಲಿತಾಂಶದ ಬಳಿಕ ನೆರೆ ಸಂತ್ರಸ್ತರಿಗೆ ಹೊಸ ಬದುಕು ಕಟ್ಟಿಕೊಡಲು ನಾವು ಬದ್ಧರಿದ್ದೇವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸುಭಾಶ ಢವಳೇಶ್ವರ, ಟಿಎಪಿಸಿಎಂಎಸ್‌ ಅಧ್ಯಕ್ಷ ಅಶೋಕ ನಾಯಿಕ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಅಪ್ಪಯ್ಯಪ್ಪ ಬಡ್ನಿಂಗೋಳ, ಪ್ರಭಾ ಶುಗರ್‌ ಉಪಾಧ್ಯಕ್ಷ ರಾಮಣ್ಣ ಮಹಾರೆಡ್ಡಿ, ಬಸವಂತ ಕಮತಿ, ಅರಬಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಶ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ಎಲ್ಲಸಮುದಾಯ ಗೌರವಿಸಲು ಸಲಹೆ:
ಎಲ್ಲಸಮುದಾಯದವರನ್ನು ಒಟ್ಟಾಗಿ ಕರೆದುಕೊಂಡು ಅಭಿವೃದ್ಧಿಗೆ ಶ್ರಮಿಸುವಂತೆ ಈಗಾಗಲೇ ರಮೇಶ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ್ದೇನೆ. ಈಗಿರುವ ಪದ್ಧತಿಯನ್ನು ಬದಲಾವಣೆ ಮಾಡಿ ಹೊಸ ಪದ್ಧತಿ ಅಳವಡಿಸಲು ತಿಳಿಸಿದ್ದೇನೆ. ಗೋಕಾಕ ನಗರದಲ್ಲಿಒಟ್ಟು 23 ಬಾರಿ ವಿವಿಧ ಸಮುದಾಯದ ಮುಖಂಡರ ಸಭೆಗಳನ್ನು ನಡೆಸಿ ಬಿಜೆಪಿಗೆ ಬೆಂಬಲ ನೀಡುವಂತೆ ಕೋರಿದ್ದರಿಂದ ಎಲ್ಲರೂ ಒಪ್ಪಿಕೊಂಡು ಬಿಜೆಪಿ ಮತ ನೀಡಿದ್ದಾರೆ. ಹೀಗಾಗಿ ಎಲ್ಲಸಮುದಾಯಗಳನ್ನು ಗೌರವಿಸಿ ಅವರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವಂತೆ ರಮೇಶ್‌ ಅವರಿಗೆ ಮನವಿ ಮಾಡಿದ್ದೇನೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ