ಆ್ಯಪ್ನಗರ

ಬೆಳಗಾವಿಯ ಮರಾಠಿ ಶಿಕ್ಷಕ ವಿನಾಯಕ ಮೋರೆ ಕಂಠಸಿರಿಯಲ್ಲಿ ಕೋಟಿ ಕಂಠ ಗಾಯನ!

ಶುಕ್ರವಾರ, ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗೀತಗಾಯನ ಕಾರ್ಯಕ್ರಮದಲ್ಲಿ 5 ಸಾವಿರ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಗೀತೆಗಳನ್ನು ಕಲಿಸಿಕೊಟ್ಟ ಶಿಕ್ಷಕ ವಿನಾಯಕ ಮೋರೆಯವರಿಗೆ ಇದರ ಶ್ರೇಯಸ್ಸು ಸಲ್ಲಬೇಕು. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಕ್ಷಕ ವಿನಾಯಕ ಮೋರೆ ಇವರ ಸಂಗೀತದ ಯೋಗದಾನವಿರುತ್ತದೆ. ವಿಶ್ವ ಕನ್ನಡ ಸಮ್ಮೇಳನದಲ್ಲಿ ಅವರು ಕಲಿಸಿದ ನಾಡ ಗೀತೆಯು ಇಂದಿಗೂ ಎಲ್ಲರಿಗೂ ನೆನಪಿನಲ್ಲಿದೆ.

Edited byಚೇತನ್ ಓ.ಆರ್. | Vijaya Karnataka Web 28 Oct 2022, 1:56 pm

ಹೈಲೈಟ್ಸ್‌:

  • ಸಂಗೀತ ಶಿಕ್ಷಕ ಮೋರೆ ಅವರಿಗೆ ಕನ್ನಡ ಮಾತನಾಡಲು ಬರುವುದಿಲ್ಲ.
  • ಮರಾಠಿ ಭಾಷಿಕರಾದರು ಸಹ ಕನ್ನಡ ಗೀತೆಗಳನ್ನು ಅತ್ಯಂತ ಪ್ರೀತಿಯಿಂದ ವಿದ್ಯಾರ್ಥಿಗಳಿಗೂ ಕಲಿಸುತ್ತಾರೆ ಮೋರೆ.
  • ಹಲವಾರು ಸರ್ಕಾರಿ ಕಾರ್ಯಕ್ರಮಗಳಿಗೆ ಗೀತ ಗಾಯನ ಮಾಡಿಸಿ ಗಾಯನ ಮಾಸ್ಟರ್ ಎಂಬ ಹೆಸರು ಮಾಡಿರುವ ಸಂಗೀತ ಶಿಕ್ಷಕರಿವರು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Koti Kantha Gayana at Suvarna Soudha, Belagavi
ಬೆಳಗಾವಿಯ ಸುವರ್ಣ ಸೌಧದ ಮುಂದೆ ನಡೆದ ಕೋಟಿ ಕಂಠ ಗಾಯನ. ಮುಂದಿನ ಸಾಲಿನಲ್ಲಿ ಮೈಕ್ ಹಿಡಿದು, ಬಿಳಿಯ ಕುರ್ತಾ ಧರಿಸಿ ಹಾಡುತ್ತಿರುವವರೇ ಸಂಗೀತ ಶಿಕ್ಷಕ ವಿನಾಯಕ ಮೋರೆ.
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿರುವ "ಕೋಟಿ ಕಂಠ ಗೀತಗಾಯನ" ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯಲ್ಲಿನ 5,000 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವಪೂರ್ಣ ಜವಾಬ್ದಾರಿಯನ್ನು ಮರಾಠಿ ಶಿಕ್ಷಕರಾದ ಹಾಗೂ ಸಮೂಹ ಗಾಯನದ ಮಾಸ್ಟರ್ ಎಂದು ಪ್ರಸಿದ್ಧರಾದ ವಿನಾಯಕ ಮೋರೆ ಮಾಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಕ್ರವಾರ ಸುವರ್ಣ ಸೌಧ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದ್ದು ಅದರ ಶ್ರೇಯಸ್ಸು ಮೋರೆಯವರಿಗೂ ಸಂದಿದೆ.

ಬೆಳಗಾವಿಯ ಸುವರ್ಣ ಸೌಧದ ಮುಂದೆ ಕೋಟಿ ಕಂಠ ಗಾಯನ ಕಾರ್ಯಕ್ರಮ.


ಕಾರ್ಯಕ್ರಮದಲ್ಲಿ, 5,000 ವಿದ್ಯಾರ್ಥಿಗಳು ಸುವರ್ಣ ಸೌಧದಲ್ಲಿ ಹಾಗೆಯೇ ಇನ್ನುಳಿದವರು ಬೇರೆ ಬೇರೆ ಕಡೆ ಹಾಡಲಿದ್ದಾರೆ. ಸಂಗೀತ ಶಿಕ್ಷಕ ವಿನಾಯಕ ಮೋರೆ ಅವರು ಅಂಗಣವಾಡಿ ಶಿಕ್ಷಕ, ನಗರದ ಬಿ.ಎಡ್. ಕಾಲೇಜಿನ ಹಾಗೂ ಶಾಲೆಯ ವಿದ್ಯಾರ್ಥಿಗಳಿಗೆ ಈ ಹಾಡುಗಳನ್ನು ಕಲಿಸಿದ್ದು ಗಮನಾರ್ಹ.

ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಕ್ಷಕ ವಿನಾಯಕ ಮೋರೆ ಇವರ ಸಂಗೀತದ ಯೋಗದಾನವಿರುತ್ತದೆ. ವಿಶ್ವ ಕನ್ನಡ ಸಮ್ಮೇಳನದಲ್ಲಿ ಅವರು ಕಲಿಸಿದ ನಾಡ ಗೀತೆಯು ಇಂದಿಗೂ ಎಲ್ಲರಿಗೂ ನೆನಪಿನಲ್ಲಿದೆ. ಸಂಗೀತ ಶಿಕ್ಷಕ ಮೋರೆ ಅವರಿಗೆ ಕನ್ನಡ ಮಾತನಾಡಲು ಬರುವುದಿಲ್ಲ ಮರಾಠಿ ಭಾಷಿಕರಾದರು ಸಹ ಕನ್ನಡ ಗೀತೆಗಳನ್ನು ಅತ್ಯಂತ ಪ್ರೀತಿಯಿಂದ ಪ್ರಭಾವ ಪೂರ್ವಕವಾಗಿ ಸ್ವತಃ ಹಾಡುತ್ತಾರೆ. ವಿದ್ಯಾರ್ಥಿಗಳಿಗೂ ಕಲಿಸುತ್ತಾರೆ.

ವಿಶ್ವದಾಖಲೆ ನಿರ್ಮಿಸಿದ ಕೋಟಿ ಕಂಠ ಗಾಯನ, 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ದನಿಗೂಡಿಸಿದ ಬೊಮ್ಮಾಯಿ
ಶುಕ್ರವಾರದಂದು, ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ವಿಶೇಷ ಆಮಂತ್ರಿತರಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ದುರ್ಯೋಧನ ಐಹೊಳೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪಿ ರಾಜೀವ ಹಾಗೂ ಜಿಲ್ಲೆಯ ಎಲ್ಲ ಶಾಸಕರು, ಸಂಸದರು ಭಾಗವಹಿಸಲಿದ್ದಾರೆ.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ